ಬೆಂಗಳೂರು: ಫೆ.13ರಂದು (ಗುರುವಾರ) ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ- ಕಾಲೇಜುಗಳಿಗೆ ಅಧಿಕೃತವಾಗಿ ರಜೆ ಘೋಷಣೆ ಮಾಡುವುದಿಲ್ಲವೆಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ಆದಾಗ್ಯೂ ಆಯಾ ಜಿಲ್ಲಾಡಳಿತಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಕ್ರಮ ವಹಿಸಬಹುದಾಗಿದೆಯೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.