ADVERTISEMENT

ಬಿಜೆಪಿ ಗೆಲುವಿಗೆ ಕಾಂಗ್ರೆಸ್ ನೆರವು: ಯಾರೊಂದಿಗೂ ಹೊಂದಾಣಿಕೆ ಮಾಡಲ್ಲ; ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2022, 6:41 IST
Last Updated 10 ಜೂನ್ 2022, 6:41 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶನಿವಾರದಿಂದ ಹೊಸಶಕೆ ಆರಂಭವಾಗಲಿದೆ. ಇನ್ನು ಯಾವುದೇ ಹೊಂದಾಣಿಕೆಗೂ ಸಿದ್ಧವಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಎರಡನೇ ಪ್ರಾಶಸ್ತ್ಯದ ಮತಗಳನ್ನೂ ಜೆಡಿಎಸ್‌ ಅಭ್ಯರ್ಥಿಗೆ ನೀಡದಮತೆ ಕಾಂಗ್ರೆಸ್‌ ಹೈಕಮಾಂಡ್‌ ಸೂಚಿಸಿದೆ ಎಂದು ಆ ಪಕ್ಷದ ನಾಯಕರು ಹೇಳಿದ್ದಾರೆ. ಜಾತ್ಯತೀತ ತತ್ವದ ಬಗ್ಗೆ ಮಾತನಾಡುವವರ ಉಡಾಫೆ ರಾಜಕಾರಣಕ್ಕೆ ಸರಿಯಾದ ಉತ್ತರ ನೀಡಲಾಗುವುದು ಎಂದರು.

ನಮ್ಮ ಪಕ್ಷದ 30-31 ಶಾಸಕರು ನಮ್ಮ ಜತೆಯೇ ಇದ್ದಾರೆ. ಕೋಲಾರದ ಶ್ರೀನಿವಾಸ ಗೌಡ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಚಲಾಯಿಸುವುದಾಗಿ ಹೇಳಿದ್ದಾರೆ. ದಿ ಗ್ರೇಟ್‌ ರಮೇಶ್‌ ಕುಮಾರ್‌ ಮತ್ತು ಸಿದ್ದರಾಮಯ್ಯ ಸೇರಿಕೊಂಡು ಶ್ರೀನಿವಾಸ ಗೌಡರ ಆತ್ಮಸಾಕ್ಷಿಯ ಮತ ಪಡೆಯುವಲ್ಲಿ ಸಫಲರಾಗಿದ್ದಾರೆ . ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಕಾಂಗ್ರೆಸ್‌ ನೆರವು ನೀಡಿದೆ. ಇದಕ್ಕಾಗಿ ಬಿಜೆಪಿ ಕಾಂಗ್ರೆಸ್‌ನವರಿಗೆ ಅಭಿನಂದನೆ ಸಲ್ಲಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಾಂಗ್ರೆಸ್‌ನವರನ್ನು ಭೇಟಿಮಾಡಲು ಹೋಗಿದ್ದರು. ನಾನು ಕೂಡ ಕಾಂಗ್ರೆಸ್‌ನವರನ್ನು ಅಭಿನಂದಿಸುತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.