
ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಕಳೆದ 8 ವರ್ಷಗಳಲ್ಲಿ ಬಾಲಿವುಡ್‌ನಲ್ಲಿ ನನಗೆ ಅಷ್ಟಾಗಿ ಕೆಲಸಗಳು ಸಿಗುತ್ತಿಲ್ಲ. ಈ ಬದಲಾವಣೆಗೆ ಕೋಮುವಾದದ ಕಾರಣ ಇರಬಹುದು ಎಂದು ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಹೇಳಿದ್ದಾರೆ. ನೇರವಾಗಿ ಇದು ನನಗೆ ಅನುಭವಕ್ಕೆ ಬಂದಿಲ್ಲ ಎಂದೂ ಅವರು ಹೇಳಿದ್ದಾರೆ.
‘ನೀವು, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಿದ್ದರಿಂದ ಕನಿಷ್ಠ 1 ಕೋಟಿ ಜನರ ಜೀವ ಉಳಿಯಿತು ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರು ನನಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ದೇಶದ ಗಮನ ಸೆಳೆದಿದ್ದ ಬೃಹನ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ಮೂಲಕ, ಅವಿಭಜಿತ ಶಿವಸೇನಾ ಈ ಪಾಲಿಕೆಯಲ್ಲಿ ಕಳೆದ ಎರಡೂವರೆ ದಶಕಗಳಿಗೂ ಹೆಚ್ಚು ಕಾಲ ಹೊಂದಿದ್ದ ಪ್ರಾಬಲ್ಯವನ್ನು ಛಿದ್ರಗೊಳಿಸಿದೆ.
ಲೋಕಸಭೆ ಚುನಾವಣೆಯನ್ನು ಬಿಜೆಪಿ ಜತೆಗೂಡಿ ಎದುರಿಸಿದ್ದ ಜೆಡಿಎಸ್, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಾಲಿಕೆಗಳ ಚುನಾವಣೆಯಲ್ಲೂ ಮೈತ್ರಿಗೆ ಮುಂದಾಗಿದೆ.
ಹಂದಿಗುಂದ: ರಾಯಬಾಗ ತಾಲ್ಲೂಕಿನ ಕಪ್ಪಲಗುದ್ದಿ ಗ್ರಾಮದ ಎಸ್‌ಎಸ್‌ಎಲ್‌ಸಿ, ಪಿಯು ವಿದ್ಯಾರ್ಥಿಗಳ ಓದಿಗೆ ಉತ್ತೇಜನ ನೀಡಲು ನಿತ್ಯ ಸಂಜೆ 7ರಿಂದ ರಾತ್ರಿ 9ರವರೆಗೆ ಟಿ.ವಿ ಮತ್ತು ಮೊಬೈಲ್‌ಫೋನ್ ಬಳಸದಂತೆ ಗ್ರಾಮ ಪಂಚಾಯಿತಿಯಲ್ಲಿ ಠರಾವ್ ಪಾಸ್ ಮಾಡಲಾಗಿದೆ. ನಾಲ್ಕು ದಿನಗಳಿಂದ ಇದನ್ನು ಪಾಲಿಸಲಾಗುತ್ತಿದೆ.
ವಾಷಿಂಗ್ಟನ್: ವೆನೆಜುವೆಲಾ ಜತೆಗೆ ಸಂಬಂಧ ಹೊಂದಿದೆ ಎಂದು ಹೇಳುವ ಮತ್ತೊಂದು ತೈಲ ಟ್ಯಾಂಕರ್ ಅನ್ನು ಅಮೆರಿಕ ವಶಪಡಿಸಿಕೊಂಡಿದೆ. ದಕ್ಷಿಣ ಅಮೆರಿಕದ ಪ್ರಮುಖ ತೈಲ ಉತ್ಪಾದನಾ ದೇಶವಾದ ವೆನೆಜುವೆಲಾ ಮೇಲೆ ತನ್ನ ನಿಯಂತ್ರಣವನ್ನು ಬಿಗಿಗೊಳಿಸುವ ಭಾಗವಾಗಿ ಅಮೆರಿಕ ಈ ಕ್ರಮ ತೆಗೆದುಕೊಂಡಿದೆ.
ಬೆಂಗಳೂರು: ಪಟ್ಟಂದೂರು ಅಗ್ರಹಾರದಲ್ಲಿ ನಮ್ಮ ಮೆಟ್ರೊ ನಿಲ್ದಾಣದಿಂದ ನೇರವಾಗಿ ಐಟಿಪಿಬಿ ಕಚೇರಿಗೆ ತಲುಪುವ ಪಾದಚಾರಿ ಮೇಲ್ಸೇತುವೆಗೆ (ಸ್ಕೈವಾಕ್) ಶುಕ್ರವಾರ ಚಾಲನೆ ನೀಡಲಾಗಿದೆ. ಇದರಿಂದಾಗಿ ಐಟಿ ಹಬ್ ಆಗಿರುವ ವೈಟ್‌ಫೀಲ್ಡ್ ಸುತ್ತಮುತ್ತ ಟೆಕಿಗಳು ವಾಹನ ಸಂದಣಿಯ ನಡುವೆ ಸಿಲುಕುವುದು ತಪ್ಪಿದ್ದು 55 ಸಾವಿರಕ್ಕೂ ಅಧಿಕ ಮಂದಿಗೆ ಪ್ರಯೋಜನವಾಗಲಿದೆ.
ಮುಂದಿನ ತಿಂಗಳ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಪಾಲ್ಗೊಳ್ಳುವುದಕ್ಕೆ ಸಂಬಂಧಿಸಿ ಉಂಟಾಗಿರುವ ಕಗ್ಗಂಟು ಬಗೆಹರಿಸಲು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ಐಸಿಸಿ) ಇಬ್ಬರು ಸದಸ್ಯರ ತಂಡ ಶನಿವಾರ ಮಧ್ಯಾಹ್ನ ಢಾಕಾಕ್ಕೆ ಬಂದಿಳಿಯಲಿದೆ.
ಶ್ರೇಯಾಂಕಾ ಪಾಟೀಲ ಅವರ ಐದು ವಿಕೆಟ್ ಗೊಂಚಲು ಹಾಗೂ ರಾಧಾ ಯಾದವ್ ಅವರ ಅರ್ಧಶತಕದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಶುಕ್ರವಾರ 32 ರನ್‌ಗಳಿಂದ ಗುಜರಾತ್ ಜೈಂಟ್ಸ್ ತಂಡವನ್ನು ಮಣಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.