
ಈ ದಿನದ ಪ್ರಮುಖ 10 ಸುದ್ದಿಗಳು
ಲೋಕಸಭೆಯಲ್ಲಿ ಗದ್ದಲ, ಜಿ ರಾಮ್ ಜಿಗೆ ವಿರೋಧ, ಗದಗದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟ ಸುದ್ದಿ ಸೇರಿದಂತೆ ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯಕ್ಕೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...
ಅಪಘಾತ
ಗದಗ ಜಿಲ್ಲೆಯ ರೋಣ ಸಮೀಪದ ಜಿಗಳೂರು ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಕ್ರಷರ್ ಮತ್ತು ಕ್ಯಾಂಟರ್ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 15 ಜನ ಮಹಿಳಾ ಕೂಲಿಕಾರ್ಮಿಕರು ಗಾಯಗೊಂಡಿದ್ದಾರೆ.
ಡೊನಾಲ್ಡ್ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರ್‍ಯಾನ್ ವೆಸ್ಲಿ ರೂತ್‌ಗೆ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.
ನರವಣೆ ಹಾಗೂ ರಾಹುಲ್ ಗಾಂಧಿ
ಭಾರತದ ಸೇನೆಯ ಮಾಜಿ ಮುಖ್ಯಸ್ಥ ಎಂ.ಎಂ.ನರವಣೆ ಅವರ ‘ಅಪ್ರಕಟಿತ ಆತ್ಮಚರಿತ್ರೆ’ ಪುಸ್ತಕದಲ್ಲಿನ ವಿಚಾರವನ್ನು ಉಲ್ಲೇಖಿಸಲು ಅನುಮತಿ ನೀಡಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪಟ್ಟು ಹಿಡಿದರು. ಈ ಹಿನ್ನೆಲೆಯಲ್ಲಿ ಗದ್ದಲ ಮುಂದುವರಿದಿದೆ.
ವಿಬಿ ಜಿ ರಾಮ್ ಜಿ ಕಾಯ್ದೆ ರದ್ದುಪಡಿಸಿ, ನರೇಗಾ ಕಾಯ್ದೆಯನ್ನು ಮರು ಸ್ಥಾಪಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ರಾಜ್ಯ ಸರ್ಕಾರ ಮಂಡಿಸಿದ ನಿರ್ಣಯವು ವಿರೋಧ ಪಕ್ಷಗಳ ಸದಸ್ಯರ ಆಕ್ರೋಶ, ಸಭಾತ್ಯಾಗದ ನಡುವೆಯೇ ಉಭಯ ಸದನಗಳಲ್ಲಿ ಅಂಗೀಕಾರಗೊಂಡಿತು
ಸೈಬರ್ ವಂಚನೆ
ದೇಶದ ವಿವಿಧೆಡೆ ನಡೆದಿರುವ ಹಲವು ಸೈಬರ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೋಟ್ಯಂತರ ರೂಪಾಯಿ ವರ್ಗಾವಣೆಗೆ ಹುಬ್ಬಳ್ಳಿಯ ಕೇಶ್ವಾಪುರದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಖಾತೆಯು (54910200000346) ಹಲವು ಬಾರಿ ಬಳಕೆಯಾಗಿರುವುದು ಬಯಲಾಗಿದೆ.
ಸಿದ್ದರಾಮಯ್ಯ
ವಿಧಾನ ಮಂಡಲದ ಅಧಿವೇಶನ ಮುಗಿದ ಬೆನ್ನಲ್ಲೇ, ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 5ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಲಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು ಭಾರತವನ್ನು ಬೆದರಿಸಲು ಸಾಧ್ಯವಿಲ್ಲ ಎಂಬುದಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಈ ಹಿಂದೆ ಸ್ಪಷ್ಟ ಸಂದೇಶ ರವಾನಿಸಿದ್ದರು ಎಂದು ವರದಿಯಾಗಿದೆ
ಬೆಂಗಳೂರು–ಪುಣೆ ನಡುವೆ ಹೈ ಸ್ಪೀಡ್ ರೈಲು ಕಾರಿಡಾರ್ ಆರಂಭಿಸಬೇಕು ಎಂದು ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪ್ರತ್ಯೇಕವಾಗಿ ಮನವಿ ಮಾಡಿದರು.
ವೈಭವ್ ಸೂರ್ಯವಂಶಿ
ಆ್ಯರನ್ ಜಾರ್ಜ್ ಶತಕ, ಆಯುಷ್ ಮ್ಹಾತ್ರೆ ಮತ್ತು ವೈಭವ್ ಸೂರ್ಯವಂಶಿ ಅವರ ಅರ್ಧಶತಕಗಳ ಮುಂದೆ ಅಫ್ಗಾನಿಸ್ತಾನವು ಒಡ್ಡಿದ್ದ ಬೆಟ್ಟದಂತಹ ಮೊತ್ತದ ಗುರಿ ಮಂಜಿನಂತೆ ಕರಗಿತು. 19 ವರ್ಷದೊಳಗಿನವರ ಭಾರತ ತಂಡವು ಯುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪ್ರವೇಶಿಸಿತು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಜೆಮಿಮಾ ರಾಡ್ರಿಗಸ್ ಮತ್ತು ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂದಾನ ಅವರು ಟಿ20 ಟ್ರೋಫಿಯೊಂದಿಗೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿ ಸ್ಮೃತಿ ಮಂದಾನ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜಿಮಿಮಾ ರಾಡ್ರಿಗಸ್ ನೇತೃತ್ವದ ತಂಡಗಳು ಗುರುವಾರ ಕೊತಂಬಿ ಕ್ರೀಡಾಂಗಣದಲ್ಲಿ ನಡೆಯುವ ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಣಸಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.