
ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಬಾಂಗ್ಲಾದೇಶ ಮಾತ್ರವಲ್ಲ ಭಾರತದಲ್ಲಿ ಕೂಡ ಹಿಂದೂಗಳ ಸ್ಥಿತಿ ಭಯಾನಕವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದ್ದಾರೆ.ಬಾಂಗ್ಲಾ ಮಾತ್ರವಲ್ಲ ಭಾರತದಲ್ಲೂ ಹಿಂದೂಗಳ ಸ್ಥಿತಿ ಭಯಾನಕವಾಗಿದೆ: ಪೇಜಾವರ ಶ್ರೀ
ಮಕ್ಕಳಿಗೆ ಆಟವಾಡಲು ಸರಳವಾಗಿ ಅವಕಾಶಗಳು ದೊರೆಯಬೇಕು. ಕ್ರೀಡೆಯು ಸಮಯದ ಅಭಾವ, ಅವಕಾಶಗಳ ವಂಚನೆ, ಟ್ರಾಫಿಕ್ ಮತ್ತು ಮೂಲಸೌಕರ್ಯಗಳ ಒತ್ತಡಕ್ಕೆ ಬಲಿಯಾಗಬಾರದು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಹೇಳಿದರು.
ಬೆಂಗಳೂರು: ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ನೀಡಿದ ದೂರಿನ ಮೇರೆಗೆ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿದ್ದರಾಮಯ್ಯ
'ಬಾಗಲಕೋಟೆಯಲ್ಲಿ ನಡೆದ ಕಲ್ಲು ತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದಕ್ಕೆ ಮಾರಕವಾಗಿದ್ದು ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಅಮೆರಿಕದ ‘ ಬಿಗಿ ಹಿಡಿತ’ಕ್ಕೆ ಸಿಲುಕಿ ಪ್ರಧಾನಿ ನರೇಂದ್ರ ಮೋದಿ ಅವರು ‘ದೈನ್ಯ ಸ್ಥಿತಿ’ಯಲ್ಲಿ ಶರಣಾಗಿದ್ದಾರೆ. ಹೀಗಾಗಿ ಅಮೆರಿಕಕ್ಕೆ ಹೆಚ್ಚಿನದನ್ನು ನೀಡಿ, ಭಾರತ ಕಡಿಮೆ ಪಡೆದುಕೊಳ್ಳುವ ಒಪ್ಪಂದಕ್ಕೆ ಅವರು ಸಹಿ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.
'ದಿ ಕೇರಳ ಸ್ಟೋರಿ 2' ಚಿತ್ರಕ್ಕೆ ನೀಡಿರುವ ಪ್ರಮಾಣೀಕರಣವನ್ನು ರದ್ದುಗೊಳಿಸಬೇಕು ಹಾಗೂ ಸಿನಿಮಾದ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಕೆಲವು ಬದಲಾವಣೆಗಳನ್ನು ಮಾಡುವ ಕುರಿತು ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಕೇರಳ ಹೈಕೋರ್ಟ್ 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ನಿರ್ಮಾಪಕರಿಗೆ, ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿಗೆ (ಸಿಬಿಎಫ್‌ಸಿ ) ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಅಸ್ಸಾಂನಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಾಚಾರ್ ಬಳಿ ಭಾರತ–ಬಾಂಗ್ಲಾ ಗಡಿಯ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಈ ವೇಳೆ ಅಮಿತ್ ಶಾ ಅವರಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ್ ಬಿಸ್ವ ಶರ್ಮಾ ಹಾಗೂ ಬಿಎಸ್‌ಎಫ್‌ನ ಹಿರಿಯ ಅಧಿಕಾರಿಗಳು ಸಾಥ್ ನೀಡಿದರು.
ನವದೆಹಲಿ: ‘ಇಂಡಿಯಾ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ’ ನಡೆಯುತ್ತಿರುವ ಹಾಲ್‌ನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅರಬೆತ್ತಲೆ ಪ್ರತಿಭಟನೆ ನಡೆಸಿತು.
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಚಿನ್ನ ಧಾರಣೆ ಏರಿಕೆ ಕಂಡಿದ್ದು, ಬೆಳ್ಳಿ ಧಾರಣೆ ಯಥಾಸ್ಥಿತಿಯಲ್ಲಿದೆ.10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹1,850 ಹೆಚ್ಚಳವಾಗಿ, ₹1,59,500ರಂತೆ ಮಾರಾಟವಾಗಿದೆ. ಬೆಳ್ಳಿ ದರಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ (ಕೆ.ಜಿಗೆ ₹2.64 ಲಕ್ಷದಷ್ಟಿದೆ) ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.
ಕ್ರಿಕೆಟ್ ಪಂದ್ಯಗಳ ಸಂದರ್ಭದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ಆಟಗಾರರು ಮೈದಾನದಲ್ಲಿ ಪರಸ್ಪರ ಕೈ ಕುಲುಕದಿರುವುದು, ಮಾತನಾಡದಿರುವುದು ನಿಜವಲ್ಲ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಆಲಿಸ್ಟರ್ ಕುಕ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.