
ಈ ದಿನದ ಪ್ರಮುಖ 10 ಸುದ್ದಿಗಳು
ರಾಷ್ಟ್ರೀಯ, ರಾಜ್ಯ, ವಿದೇಶಕ್ಕೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ನಿರ್ಮಿಸಿರುವ ಏರ್‌ಬಸ್ ಎಚ್ 125 ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕದ ಉದ್ಘಾಟನೆ ಬಳಿಕ ಏರ್‌ಬಸ್ ಎಚ್ 125 ಹೆಲಿಕಾಪ್ಟರ್ ಮುಂದೆ ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರಿನ್ ವಾಟ್ರಿನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾಣಿಸಿಕೊಂಡರು
ಕೋಲಾರ: ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್‌ಎಲ್) ನಿರ್ಮಿಸಿರುವ ‘ಏರ್‌ಬಸ್ ಎಚ್ 125’ ಲಘು ಹೆಲಿಕಾಪ್ಟರ್‌ನ ಜೋಡಣಾ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಚಾಲನೆ ನೀಡಿದರು.
ಸಿದ್ದರಾಮಯ್ಯ, ಡಿಕೆಶಿ, ಮಹದೇವಪ್ಪ
ಬೆಂಗಳೂರು : ಬೆಂಗಳೂರು: ‘ನಾಯಕತ್ವ ವಿಚಾರ ದಲ್ಲಿ ನಾನು, ಸಿದ್ದರಾಮಯ್ಯ ಮತ್ತು ಹೈಕಮಾಂಡ್ ಎಲ್ಲರೂ ಸೇರಿ ತೆಗೆದುಕೊಂಡಿರುವ ತೀರ್ಮಾನ ಏನು ಎಂಬುದನ್ನು ಸಮಯ ಬಂದಾಗ ಸಿದ್ದರಾಮಯ್ಯ ಅವರೇ ತಿಳಿಸುತ್ತಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಗೃಹ ಸಚಿವ ಜಿ. ಪರಮೇಶ್ವರ
ಮಂಗಳೂರು: ‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸದ್ಯ ಮಧ್ಯಂತರ ವರದಿಯನ್ನು ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು’ ಎಂದು ಗೃಹಸಚಿವ ಜಿ.ಪರಮೇಶ್ವರ ಮಂಗಳವಾರ ಇಲ್ಲಿ ತಿಳಿಸಿದರು.
ನವದೆಹಲಿ: ಬಹುಕೋಟಿ ಮೌಲ್ಯದ ಓಬಳಾಪುರಂ ಗಣಿ ಕಂಪನಿ ಅದಿರು ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಐಎಎಸ್ ಅಧಿಕಾರಿ ವೈ.ಶ್ರೀಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ. ಈ ಮೂಲಕ ಅವರ ವಿಚಾರಣೆಗೆ ಇದ್ದ ಅಡ್ಡಿ ನಿವಾರಣೆ ಆಗಿದೆ.
ಅದಾನಿ ಸಮೂಹ
ನವದೆಹಲಿ: ನವೀಕರಿಸಬಹುದಾದ ಇಂಧನ ಬಳಕೆ ಮಾಡುವ ಭಾರಿ ಸಾಮರ್ಥ್ಯದ ದತ್ತಾಂಶ ಕೇಂದ್ರಗಳನ್ನು ಅಭಿವೃದ್ಧಿಪಡಿಸಲು 2035ರೊಳಗೆ 100 ಬಿಲಿಯನ್ ಡಾಲರ್ (ಸರಿಸುಮಾರು ₹9.07 ಲಕ್ಷ ಕೋಟಿ) ಹೂಡಿಕೆ ಮಾಡುವುದಾಗಿ ಅದಾನಿ ಸಮೂಹ ಹೇಳಿದೆ.
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಫೆ.28ರಿಂದ ಆರಂಭವಾಗಲಿದ್ದು, 1,217 ಕೇಂದ್ರಗಳಲ್ಲಿ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ‘ಪ್ರತಿ ಪರೀಕ್ಷಾ ಕೇಂದ್ರವೂ ಸಿಸಿಟಿವಿ ಕ್ಯಾಮೆರಾ ಒಳಗೊಂಡಿದೆ. ವಿವಿಧ ಹಂತದ ಅಧಿಕಾರಿಗಳು ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾವಹಿಸಲಿದ್ದಾರೆ. ಪರೀಕ್ಷಾ ಕೇಂದ್ರದ ಹೊರಗೂ ಕಟ್ಟುನಿಟ್ಟಿನ ಕಣ್ಗಾವಲಿಗೆ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದರು.
ಸಂಸತ್ ಭವನ
ನವದೆಹಲಿ: ವಿರಳ ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯವು 2025–26ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹300 ಕೋಟಿಯಲ್ಲಿ ₹30 ಕೋಟಿಯಷ್ಟೇ ಬಳಕೆ ಯಾಗಿದೆ.
ನವದೆಹಲಿ: ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವು ಮುಂದಿನ ಎರಡು ವರ್ಷಗಳಲ್ಲಿ 200 ಶತಕೋಟಿ ಡಾಲರ್ (ಅಂದಾಜು ₹18.13 ಲಕ್ಷ ಕೋಟಿ) ಹೂಡಿಕೆಯನ್ನು ನಿರೀಕ್ಷಿಸುತ್ತಿದೆ ಎಂದು ಕೇಂದ್ರ ಐ.ಟಿ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಹೇಳಿದರು.
ಕಲ್ಲು ತೂರಾಟ
ಚಿಕ್ಕಮಗಳೂರು: ನಗರದ ವಿಜಯಪುರ ಬಡಾವಣೆಯ ಮನೆಯೊಂದರ ಮೇಲೆ ಕಲ್ಲು ತೂರಿ, ನುಗ್ಗಲು ಯತ್ನಿಸಿದ ಆರೋಪದಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಗುಂಪೊಂದು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದೆ. ಈ ಕುರಿತು ದೂರು– ಪ್ರತಿ ದೂರು ದಾಖಲಾಗಿವೆ.
ಗೌತಮ್ ಗಂಭೀರ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್
ಬೆಂಗಳೂರು: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ 'ಸೂಪರ್ 8'ರ ಹಂತಕ್ಕೆ ವೇದಿಕೆ ಸಿದ್ದಗೊಂಡಿದೆ. ಆತಿಥೇಯ ಭಾರತ ತಂಡವು ಸೂಪರ್ ಎಂಟು ಹಂತದ ಮೊದಲ ಗುಂಪಿನಲ್ಲಿ ಕಾಣಿಸಿಕೊಂಡಿದೆ. ಇದೇ ಗುಂಪಿನಲ್ಲಿ ಕಳೆದ ಬಾರಿಯ ರನ್ನರ್-ಅಪ್ ಆದ ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಜಿಂಬಾಬ್ವೆ ತಂಡಗಳು ಅರ್ಹತೆ ಗಿಟ್ಟಿಸಿಕೊಂಡಿವೆ. ಎರಡನೇ ಗುಂಪಿನಲ್ಲಿ ಜಂಟಿ ಆತಿಥ್ಯ ವಹಿಸುತ್ತಿರುವ ಶ್ರೀಲಂಕಾ ಜೊತೆಗೆ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ತೇರ್ಗಡೆ ಹೊಂದಿವೆ. ಇನ್ನೊಂದು ತಂಡ ಯಾವುದು ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.