ADVERTISEMENT

2026 ಜನವರಿ 13: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜನವರಿ 2026, 3:01 IST
Last Updated 13 ಜನವರಿ 2026, 3:01 IST
   

ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

GBA ವ್ಯಾಪ್ತಿಯ 5 ನಗರ ಪಾಲಿಕೆಗಳಿಗೆ ಜೂನ್‌ನಲ್ಲಿ ಚುನಾವಣೆ: ಸುಪ್ರಿಂಕೋರ್ಟ್ ಆದೇಶ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿದೆ. 

ಲಾಲ್‌ಬಾಗ್‌ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ: ತೇಜಸ್ವಿ–ವಿಸ್ಮಯ ಪರಿಕಲ್ಪನೆ

‘ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಬದುಕು–ಬರಹ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್‌ಬಾಗ್‌ನಲ್ಲಿ ಜ.14ರಿಂದ 26ರವರೆಗೆ ನಡೆಯಲಿದೆ’ ಎಂದು ತೋಟಗಾರಿಕೆ ಇಲಾಖೆಯ ಕಾರ್ಯದರ್ಶಿ ಆರ್. ಗಿರೀಶ್ ತಿಳಿಸಿದರು. 

ADVERTISEMENT

ಇಸ್ರೊದ ವರ್ಷದ ಮೊದಲ ಉಪಗ್ರಹ ಉಡಾವಣೆ ಯೋಜನೆ ನಿಷ್ಫಲ: ಕಕ್ಷೆ ತಲುಪಲು ಮತ್ತೆ ವಿಫಲ ವಿಫಲ

ವಿದೇಶದ ಭೂ ಸರ್ವೇಕ್ಷಣಾ ಉಪಗ್ರಹ ಸೇರಿದಂತೆ 16 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದ್ದ ಪಿಎಸ್‌ಎಲ್‌ವಿ–ಸಿ62 ರಾಕೆಟ್‌ನಲ್ಲಿ ತಾಂತ್ರಿಕ ದೋಷವುಂಟಾಗಿ ಯೋಜನೆಯು ವಿಫಲವಾಗಿದೆ ಎಂದು ಇಸ್ರೊ ಸೋಮವಾರ ತಿಳಿಸಿದೆ.

ಬಂಗಾಳ: ಇಬ್ಬರಲ್ಲಿ ನಿಫಾ ವೈರಸ್ ಶಂಕೆ

ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿರುವ ಏಮ್ಸ್‌ ಐಸಿಎಂಆರ್‌ನ ವೈರಸ್‌ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯದಲ್ಲಿ ನಿಫಾ ವೈರಸ್‌ನ ಎರಡು ಶಂಕಿತ ಪ್ರಕರಣಗಳು ಪತ್ತೆಯಾಗಿವೆ.

ಚಲಿಸುತ್ತಿದ್ದ ಕಾರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನದ ಬೀಕಾನೇರ್‌ನ ನಾಪಾಸರ್‌ ಎಂಬಲ್ಲಿ ಜ.6ರಂದು ಪಿಯು ವಿದ್ಯಾರ್ಥಿನಿಯನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು, ದೂರು ನೀಡಿ ಎರಡು ದಿನ ಕಳೆದರೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ.

ನೈಸ್‌ಗೆ ಪರ್ಯಾಯ ಯೋಜನೆ ರೂಪಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

‘ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್‌ (ಬಿಎಂಐಸಿ) ಯೋಜನೆಯನ್ನು ಮರು ಪರಿಶೀಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಗದಗ | ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿ,100 ವರ್ಷ ಹಳೆಯದ್ದು: ಜಿಲ್ಲಾಧಿಕಾರಿ

‘ಲಕ್ಕುಂಡಿಯಲ್ಲಿ ಸಿಕ್ಕಿರುವುದು ನಿಧಿ ಅಲ್ಲ ಅಂತ ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿ ರಮೇಶ್ ಮೂಲಿಮನಿ ಬಾಯ್ತಪ್ಪಿನಿಂದ ಹೇಳಿಕೆ ನೀಡಿದರು’ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ತಿಳಿಸಿದರು.

ಬಿಗ್‌ ಬಾಸ್‌ ಷೋನಲ್ಲಿ 'ರಣಹದ್ದು ಸ್ವಭಾವ' ಎಂದ ನಟ ಕಿಚ್ಚ ಸುದೀಪ: ಆಕ್ಷೇಪ

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಬಿಗ್‌ ಬಾಸ್‌’ ಕನ್ನಡ ರಿಯಾಲಿಟಿ ಷೋದ 12ನೇ ಆವೃತ್ತಿಯಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ನಿರೂಪಕ ಕಿಚ್ಚ ಸುದೀಪ ತಪ್ಪಾದ ಮಾಹಿತಿ ನೀಡಿದ್ದಾರೆ ಎಂದು ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್‌ ಆಕ್ಷೇಪ ಎತ್ತಿದೆ.

Gold & Silver Price: ಬೆಳ್ಳಿ ಕೆ.ಜಿಗೆ ₹15 ಸಾವಿರ ಏರಿಕೆ

ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಬೆಳ್ಳಿ ದರವು ಕೆ.ಜಿಗೆ ₹15 ಸಾವಿರದಷ್ಟು ಹೆಚ್ಚಳವಾಗಿ, ₹2.65 ಲಕ್ಷದಂತೆ ಮಾರಾಟವಾಗಿದೆ. 10 ಗ್ರಾಂ ಚಿನ್ನದ (ಶೇ 99.9ರಷ್ಟು ಪರಿಶುದ್ಧತೆ) ದರವು ₹2,900ರಷ್ಟು ಏರಿಕೆಯಾಗಿ, ₹1,44,600ಕ್ಕೆ ತಲುಪಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

WPL | ಗ್ರೇಸ್ ಹ್ಯಾರಿಸ್ ಮಿಂಚಿನ ಆಟ: ಯುಪಿ ವಾರಿಯರ್ಸ್ ವಿರುದ್ಧ RCB ಗೆಲುವು

ಆರಂಭ ಆಟಗಾರ್ತಿಯರಾದ ಗ್ರೇಸ್ ಹ್ಯಾರಿಸ್‌ (83 ರನ್‌, 40 ಎಸೆತ) ಮತ್ತು ನಾಯಕಿ ಸ್ಮೃತಿ ಮಂದಾನ ಅವರ ಅಮೋಘ ಶತಕದ ಜೊತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್‌ ಪಂದ್ಯದಲ್ಲಿ ಸೋಮವಾರ ಯುಪಿ ವಾರಿಯರ್ಸ್ ತಂಡದ ವಿರುದ್ಧ 9 ವಿಕೆಟ್‌ಗಳ ಸುಲಭ ಜಯ ಗಳಿಸಿತು. ಇದು ಆರ್‌ಸಿಬಿಗೆ ಸತತ ಎರಡನೇ ಜಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.