ADVERTISEMENT

‘ನಿಮ್ಮ ಸಾಹಸಗಾಥೆಯನ್ನು ನೀವೇ ರಚಿಸಿ’ ಪ್ರಚಾರ ಆಂದೋಲನ

ಪ್ರವಾಸೋದ್ಯಮ ಇಲಾಖೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2019, 20:04 IST
Last Updated 16 ಫೆಬ್ರುವರಿ 2019, 20:04 IST
ಎಚ್‌.ಡಿ.ಕುಮಾರಸ್ವಾಮಿ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿದರು. ವಸತಿ ಸಚಿವ ಎಂಟಿಬಿ ನಾಗರಾಜ್‌, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ್‌, ಸಚಿವ ಸಾ.ರಾ.ಮಹೇಶ್‌, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕುಮಾರ್‌ ಪುಷ್ಕರ್‌, ಇಲಾಖೆಯ ನಿರ್ದೇಶಕಿ ಪ್ರಿಯಾಂಕ ಮೇರಿ ಫ್ರಾನ್ಸಿಸ್‌, ಮುಖ್ಯಮಂತ್ರಿ ಕಾರ್ಯದರ್ಶಿ ಸೆಲ್ವಕುಮಾರ್ ಇದ್ದಾರೆ

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ‘ನಿಮ್ಮ ಸಾಹಸಗಾಥೆಯನ್ನು ನೀವೇ ರಚಿಸಿ’ ಎಂಬ ಪ್ರಚಾರ ಆಂದೋಲನಕ್ಕೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಶನಿವಾರ ಚಾಲನೆ ನೀಡಿದರು.

‘ರಾಜ್ಯದ ಪ್ರವಾಸಿ ತಾಣಗಳನ್ನು ಪರಿಚಯಿಸಲು ಟಿವಿಸಿ, ಮುದ್ರಣ ಜಾಹೀರಾತು ಹಾಗೂ ಮಾರ್ಕೆಟಿಂಗ್ ಕೊಲ್ಯಾಟರ್ಸ್‌ಗಳನ್ನು ಒಳಗೊಂಡ ಈ ಕಾರ್ಯಕ್ರಮ ರೂಪಿಸಲಾಗಿದೆ. ಇದರ ಅಂಗವಾಗಿ ರೂಪಿಸಿದ ಕಿರುಚಿತ್ರ ಹಾಗೂ ಜಾಹೀರಾತುಗಳು ಅದ್ಭುತವಾಗಿ ಮೂಡಿಬಂದಿವೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌, ‘ವಿಶ್ವ ಪಾರಂಪರಿಕ ತಾಣಗಳು, ರಾಷ್ಟ್ರೀಯ ಉದ್ಯಾನಗಳು, ಅಭಯಾರಣ್ಯಗಳು, ಗಿರಿಧಾಮಗಳು, ಜಲಪಾತಗಳು, ಬೀಚ್‌ಗಳಂತ ಸುಂದರ ತಾಣಗಳು ಪ್ರವಾಸಿಗರನ್ನು ಆಕರ್ಷಿಸುತ್ತವೆ. ಪ್ರವಾಸಿಗರಿಗೆ ರಾಜ್ಯದ ಪ್ರವಾಸ ನಿರಾಸೆ ಮೂಡಿಸದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.