ADVERTISEMENT

ಮುಗಿಯದ ‘ಟೊಯೊಟಾ’ ಸಂಘರ್ಷ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 21:13 IST
Last Updated 25 ನವೆಂಬರ್ 2020, 21:13 IST

ರಾಮನಗರ: ಬಿಡದಿಯ ಟೊಯೊಟಾ ಕಿರ್ಲೋಸ್ಕರ್‌ ಮೋಟಾರ್ಸ್ ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ನೌಕರರ ನಡುವಿನಸಂಘರ್ಷ ಮತ್ತೊಂದು ಹಂತ ತಲುಪಿದೆ. ಆಡಳಿತ ಮಂಡಳಿ ಮತ್ತು ನೌಕರರ ಸಂಘದ ಪ್ರತಿನಿಧಿಗಳು ಬುಧವಾರಪ್ರತ್ಯೇಕ ಪತ್ರಿಕಾಗೋಷ್ಠಿ ನಡೆಸಿ ತಮ್ಮ ನಿಲುವುಗಳನ್ನು ಪ್ರಕಟಿಸಿದ್ದಾರೆ.

‘ಟೊಯೊಟಾ ವಿವಾದ ಬಗೆಹರಿಸಲು ರಾಜ್ಯ ಸರ್ಕಾರ ಹಾಗೂ ಕಾರ್ಮಿಕ ಇಲಾಖೆ ಮಧ್ಯಪ್ರವೇಶಿಸಲಿ’ ಎಂದುಕಾರ್ಮಿಕಸಂಘಟನೆ ಒತ್ತಾಯಿಸಿದೆ. ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಗೊಳಿಸಲು ಸಿದ್ಧ ಎಂಬ ಸಂದೇಶ ರವಾನಿಸಿದೆ. ‘ಶಿಸ್ತು ಉಲ್ಲಂಘಿಸಿದ ನೌಕರರ ವಿರುದ್ಧ ಕ್ರಮ ಖಚಿತ.40 ಕಾರ್ಮಿಕರ ಅಮಾನತು ಆದೇಶ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈಷರತ್ತು ಒಪ್ಪಿ ಸಂಧಾನ ಮಾತುಕತೆಗೆ ಬರುವುದಾದರೆ ಸ್ವಾಗತ’ಎಂದು ಟಿಕೆಎಂ ಆಡಳಿತ ಮಂಡಳಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT