ರಾಮನಗರ: ಟೊಯೊಟಾ ಕಾರ್ಮಿಕರ ಸಮಸ್ಯೆ ಕುರಿತು ಸದನದಲ್ಲಿ ಸರ್ಕಾರದ ಗಮನ ಸೆಳೆಯುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಿಡದಿಯ ಟೊಯೊಟಾ ಕಾರ್ಖಾನೆ ಎದುರು ಭಾನುವಾರ ಕಾರ್ಮಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾರ್ಖಾನೆ ಲಾಕೌಟ್ ಆದಾಗ ಸರ್ಕಾರ ಕಾರ್ಮಿಕರ ಪರವಾಗಿ ನಿಲ್ಲಬೇಕಿತ್ತು. ಆದರೆ ಅವರ ಬೇಜವಾಬ್ದಾರಿಯಿಂದ ಇಷ್ಟು ದಿನಗಳ ಕಾಲ ಕಾರ್ಮಿಕರು ಹೋರಾಟ ನಡೆಸಿದ್ದಾರೆ. ಸರ್ಕಾರ ಹಾಗೂ ಸಚಿವರು ಕಾರ್ಖಾನೆ ಆಡಳಿತ ಮಂಡಳಿ ಅವರನ್ನು ಕರೆದು ಮಾತನಾಡಬೇಕಿತ್ತು. ಅದನ್ನು ಬಿಟ್ಟು 'ನ್ಯಾಯಾಲಯ ಇದೆ. ಅಲ್ಲಿ ಬಗೆಹರಿಸಿಕೊಳ್ಳಿ' ಎಂದು ಜಿಲ್ಲಾ ಉಸ್ತುವಾರಿ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯರಾದ ಸಿ.ಎಂ. ಲಿಂಗಪ್ಪ, ಎಸ್. ರವಿ, ಮಾಜಿ ಶಾಸಕ ಎಚ್.ಸಿ. ಬಾಲಕೃಷ್ಣ ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.