ADVERTISEMENT

ಸಂಚಾರ ನಿಯಮ ಉಲ್ಲಂಘನೆ: ದಂಡದಲ್ಲಿ ಶೇ50ರಷ್ಟು ಪಾವತಿಸಲು ವಾಹನ ಮಾಲೀಕರಿಗೆ ಅವಕಾಶ

​ಪ್ರಜಾವಾಣಿ ವಾರ್ತೆ
Published 22 ಆಗಸ್ಟ್ 2025, 13:39 IST
Last Updated 22 ಆಗಸ್ಟ್ 2025, 13:39 IST
<div class="paragraphs"><p>ದಂಡ (ಸಾಂದರ್ಭಿಕ ಚಿತ್ರ)</p></div>

ದಂಡ (ಸಾಂದರ್ಭಿಕ ಚಿತ್ರ)

   

– ಐಸ್ಟಾಕ್ ಚಿತ್ರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಶೇ 50ರಷ್ಟು ರಿಯಾಯಿತಿಯಡಿ ದಂಡ ಪಾವತಿಸಲು ವಾಹನಗಳ ಮಾಲೀಕರಿಗೆ ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದ್ದು, ಶನಿವಾರದಿಂದಲೇ ವಾಹನಗಳ ಮಾಲೀಕರು ದಂಡ ಪಾವತಿಸಬಹುದು. ಸೆಪ್ಟೆಂಬರ್ 12ರವರೆಗೆ ದಂಡ ಪಾವತಿಸಲು ಅವಕಾಶವಿದೆ.

ADVERTISEMENT

ಬಿಟಿಪಿ ಅಸ್ತ್ರಂ, ಕರ್ನಾಟಕ ರಾಜ್ಯ ಪೊಲೀಸ್(ಕೆಎಸ್​​​ಪಿ) ಆ್ಯಪ್, ಬೆಂಗಳೂರು ಸಂಚಾರ ಪೊಲೀಸ್ ಅಥವಾ ಕರ್ನಾಟಕ ಒನ್ ವೆಬ್‌ಸೈಟ್‌ನಲ್ಲಿ ವಾಹನದ ನೋಂದಣಿ ಸಂಖ್ಯೆ ನಮೂದಿಸಿ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ತಿಳಿದುಕೊಳ್ಳಬಹುದು. ಬಳಿಕ, ಪಾವತಿಸಲು ಇಚ್ಛಿಸುವ ದಂಡದ ಮೊತ್ತವನ್ನು ಆಯ್ಕೆ ಮಾಡಿದರೆ, ರಿಯಾಯಿತಿ ಮೊತ್ತದ ಪಾವತಿಯ ಆಯ್ಕೆ ಲಭ್ಯವಾಗುತ್ತದೆ. ನಂತರ, ದಂಡದ ಮೊತ್ತ ಪಾವತಿಸಬಹುದು.

ಸಮೀಪದ ಸಂಚಾರ ಪೊಲೀಸ್ ಠಾಣೆಗಳು, ಇನ್‌ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ವಾಹನದ ನೋಂದಣಿ ಸಂಖ್ಯೆಯ ವಿವರ ನೀಡುವ ಮೂಲಕವೂ ದಂಡ ಪಾವತಿಸಬಹುದು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.  

ತಪ್ಪಾಗಿ ದಂಡ ವಿಧಿಸಲಾಗಿದ್ದರೆ, ಮರುಪರಿಶೀಲನೆಯ ದೂರನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದು ಅಥವಾ ಸಂಚಾರ ನಿರ್ವಹಣಾ ಕೇಂದ್ರಕ್ಕೆ ತೆರಳಿ ದೂರು ಸಲ್ಲಿಸುವ ಮೂಲಕವೂ ಸರಿಪಡಿಸಿಕೊಳ್ಳಬಹುದು ಎಂದು ಸಂಚಾರ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.