ADVERTISEMENT

ಕೈತಪ್ಪಿದ ಸಚಿವ ಸ್ಥಾನ: ರಘುಮೂರ್ತಿ ಅಸಮಾಧಾನ,ನಿಗಮ ಮಂಡಳಿ ಸ್ಥಾನ ನಿರಾಕರಣೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2018, 13:13 IST
Last Updated 22 ಡಿಸೆಂಬರ್ 2018, 13:13 IST
ಟಿ. ರಘುಮೂರ್ತಿ, ಚಳ್ಳಕೆರೆ ಶಾಸಕ.
ಟಿ. ರಘುಮೂರ್ತಿ, ಚಳ್ಳಕೆರೆ ಶಾಸಕ.   

ಚಿತ್ರದುರ್ಗ: ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಲು ತೀರ್ಮಾನಿಸಿರುವ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಸಚಿವ ಸ್ಥಾನ ಸಿಗುವರೆಗೂ ಶಾಸಕರಾಗಿಯಷ್ಟೇ ಮುಂದುವರಿಯುವುದಾಗಿ ಪ್ರಕಟಿಸಿದ್ದಾರೆ.

‘ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಅವಕಾಶ ಸಿಗದಿರುವುದರಿಂದ ಬೇಸರವಾಗಿದೆ. ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ. ಶಾಸಕನಾಗಿಯೇ ಇರುತ್ತೇನೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗುವುದಿಲ್ಲ. ಮತ್ತೊಬ್ಬರಂತೆ ಎಲ್ಲಿಗೂ ಹೋಗುವುದಿಲ್ಲ. ಪಕ್ಷಕ್ಕೆ ನಿಷ್ಠನಾಗಿದ್ದು, ಮುಖಂಡರಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತೇನೆ. ಚಿತ್ರದುರ್ಗ ಜಿಲ್ಲೆಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಗಮನ ಸೆಳೆಯುತ್ತೇನೆ’ ಎಂದು ಹೇಳಿದರು.

ADVERTISEMENT

ಶಾಸಕ ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಚಳ್ಳಕೆರೆ ನಗರಸಭೆಯ 16 ಕಾಂಗ್ರೆಸ್‌ ಸದಸ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.