ರಾಮನಗರ: ಬೆಂಗಳೂರು–ಮೈಸೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್‌ಪ್ರೆಸ್‌ನ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ರೈಲು ಚನ್ನಪಟ್ಟಣ ಸಮೀಪದ ಶೆಟ್ಟಿಹಳ್ಳಿ ನಿಲ್ದಾಣದಲ್ಲಿ ಒಂದು ಗಂಟೆ ಕಾಲ ನಿಂತಿತ್ತು.
ಮಂಗಳವಾರ ಮಧ್ಯಾಹ್ನ 3.15ಕ್ಕೆ ಬೆಂಗಳೂರಿನಿಂದ ಮೈಸೂರಿಗೆ ಹೊರಟ ರೈಲು 4.15ರ ಸುಮಾರಿಗೆ ರೈಲು ಶೆಟ್ಟಿಹಳ್ಳಿ ನಿಲ್ದಾಣ ತಲುಪುತ್ತಲೇ ಎಂಜಿನ್‌ನಲ್ಲಿನ ತಾಂತ್ರಿಕ ದೋಷದಿಂದಾಗಿ ಸಂಚಾರ ನಿಲ್ಲಿಸಿತು. 5.15ರವರೆಗೂ ನಿಲ್ದಾಣದಲ್ಲಿಯೇ ನಿಂತಿದ್ದರಿಂದ ಪ್ರಯಾಣಿಕರು ಪರದಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.