ವರ್ಗಾವಣೆ
ಬೆಂಗಳೂರು: ಐಎಎಸ್ ಅಧಿಕಾರಿ ಜಗದೀಶ ಕೆ.ಜಿ. ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಇನ್ನೂ ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಬಸವರಾಜೇಂದ್ರ ಎಚ್. ಅವರನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರನ್ನು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿ ವರ್ಗಾವಣೆ ಮಾಡಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ (ಮಧ್ಯಾಹ್ನದ ಬಿಸಿಯೂಟ) ನಿರ್ದೇಶಕರ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಐಎಫ್‌ಎಸ್ ಅಧಿಕಾರಿಗಳ ವರ್ಗಾವಣೆ: ಸ್ಮಿತಾ ಬಿಜ್ಜೂರ್ ಅವರಿಗೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ಪ್ರಚಾರ ಮತ್ತು ಐಸಿಟಿ) ಬಡ್ತಿ ನೀಡಲಾಗಿದೆ.
ಪಿ.ಸಿ. ರೇ ಅವರನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ (ವನ್ಯಜೀವಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕ) ವರ್ಗಾವಣೆ ಮಾಡಲಾಗಿದೆ.
ಮನೋಜ್ ಕುಮಾರ್ ಅವರನ್ನು ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಜತೆಗೆ ಎಂಎಸ್‌ಐಎಲ್‌ನ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಉಪೇಂದ್ರ ಪ್ರತಾಪ್ ಸಿಂಗ್ ಅವರನ್ನು ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.