
ಪ್ರಜಾವಾಣಿ ವಾರ್ತೆ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ನಿರ್ಬಂಧಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನಾಲ್ಕು ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದನೆ ನೀಡುವ ನೇರ ಅಥವಾ ಪರೋಕ್ಷವಾದ ಯಾವುದೇ ಜಾಹೀರಾತುಗಳನ್ನು ಮುಂದೆ ಪ್ರಚಾರ ಮಾಡಬಾರದು. ಈಗಾಗಲೇ ಅಂಥ ಜಾಹೀರಾತು ಅಳವಡಿಸಿದ್ದರೆ ಅವುಗಳನ್ನು ತೆರವುಗೊಳಿಸಲು ಸಮಯ ನಿಗದಿ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.