ಎಂ.ಬಿ. ಪಾಟೀಲ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಕೈಗಾರಿಕಾ ಬೆಳವಣಿಗೆ, ವಿಶ್ವ ದರ್ಜೆಯ ಸರಕು ಸಾಗಣೆ, ಕೈಗಾರಿಕಾ ಕಾರಿಡಾರ್‌ಗಳ ಮೂಲಸೌಕರ್ಯ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ರಚನಾತ್ಮಕ ಕ್ರಮಗಳನ್ನು ತೆಗೆದುಕೊಂಡಿದೆ. ಉಕ್ಕು ವಲಯದ ಸಾಗಣೆ ವೆಚ್ಚವನ್ನು ಶೇ 14ರಿಂದ ಶೇ 8ಕ್ಕೆ ಇಳಿಸಿದರೆ ಇನ್ನಷ್ಟು ಅನುಕೂಲವಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.
ಮುಂಬೈನಲ್ಲಿ ನಡೆದ ಅಂತರರಾಷ್ಟ್ರೀಯ ಪ್ರದರ್ಶನ ಮತ್ತು ವಾಣಿಜ್ಯ ಸಮಾವೇಶ ‘ಇಂಡಿಯಾ ಸ್ಟೀಲ್-25’ರಲ್ಲಿ ‘ಕರ್ನಾಟಕದಲ್ಲಿನ ಉಕ್ಕು ವಲಯದ ಭವಿಷ್ಯ’ ಕುರಿತು ಅವರು ಮಾತನಾಡಿದರು.
ರಾಜ್ಯದ ಬಳ್ಳಾರಿ, ಚಿತ್ರದುರ್ಗ, ಸಂಡೂರು ಪ್ರದೇಶಗಳಲ್ಲಿನ ಕಬ್ಬಿಣದ ಅದಿರಿನ ನಿಕ್ಷೇಪಗಳು ಭಾರತದ ಖನಿಜ ಆಧಾರಿತ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ದೇಶದ ಉಕ್ಕು ಉತ್ಪಾದನೆಯಲ್ಲಿ ಕರ್ನಾಟಕದ ಪಾಲು ಶೇ 15ರಷ್ಟಿದೆ. ಮೂಲಸೌಕರ್ಯ, ಬಂದರು, ಕೈಗಾರಿಕಾ ವಲಯ, ಟ್ರಕ್ ಟರ್ಮಿನಲ್ ಮತ್ತು ಸಾರಿಗೆ ವ್ಯವಸ್ಥೆಯ ಸಂಪರ್ಕ ಜಾಲಗಳು ವ್ಯವಸ್ಥಿತವಾಗಿ ಇರುವ ಕಾರಣ ಕೇಂದ್ರ ಸರ್ಕಾರ ರಾಜ್ಯಕ್ಕೆ ಹೆಚ್ಚಿನ ಸಹಕಾರ ನೀಡಬೇಕು ಎಂದು ಕೋರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.