ADVERTISEMENT

ಇಳಕಲ್‌ನಲ್ಲಿ ಕೋವಿಡ್ ಚೆಕ್ ಪೋಸ್ಟ್‌ಗೆ ನುಗ್ಗಿದ ಲಾರಿ; ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 24 ಮೇ 2020, 17:22 IST
Last Updated 24 ಮೇ 2020, 17:22 IST
ಚೆಕ್‌ಪೋಸ್ಟ್‌ ಬಳಿ ಉರುಳಿ ಬಿದ್ದಿರುವ ಲಾರಿ
ಚೆಕ್‌ಪೋಸ್ಟ್‌ ಬಳಿ ಉರುಳಿ ಬಿದ್ದಿರುವ ಲಾರಿ    

ಬಾಗಲಕೋಟೆ: ಇಳಕಲ್ ತಾಲ್ಲೂಕಿನ ಗುಗ್ಗಲಮರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಕೋವಿಡ್-19 ಚೆಕ್ ಪೋಸ್ಟ್ ಗೆ ಭಾನುವಾರ ರಾತ್ರಿ ಲಾರಿ ನುಗ್ಗಿ ಪಲ್ಟಿಯಾಗಿ ಬಿದ್ದಿದೆ.

ಅಪಘಾತದಲ್ಲಿ ಚೆಕ್ ಪೋಸ್ಟ್ ನಲ್ಲಿದ್ದ ಇಬ್ಬರು ಸಿಬ್ಬಂದಿ ಹಾಗೂ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಂಟೇನರ್ ಹೊತ್ತು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಹೊಡೆದುಕೊಂಡು ಚೆಕ್ ಪೋಸ್ಟ್ ನ ಟೆಂಟ್ ಗೆ ನುಗ್ಗಿದೆ. ಘಟನೆಯಲ್ಲಿ ಟೆಂಟ್ ಕೆಳಗೆ ನಿಲ್ಲಿಸಿದ್ದ ಸಿಬ್ಬಂದಿಯ ಬೈಕ್ ಗಳು ನಜ್ಜುಗುಜ್ಜಾಗಿವೆ

ADVERTISEMENT

ಲಾರಿ ಬೆಂಗಳೂರಿನಿಂದ ವಿಜಯಪುರಕ್ಕೆ ಹೊರಟಿತ್ತು. ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನನ್ನು ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.