ಯಲ್ಲಾಪುರ ಬಳಿ ಅರೆಬೈಲ್ ಘಾಟ್‌ನಲ್ಲಿ ಹಣ್ಣು ತುಂಬಿದ್ದ ಲಾರಿ ಪಲ್ಟಿ: 10 ಜನರ ಸಾವು
ಕಾರವಾರ: ಯಲ್ಲಾಪುರ ತಾಲ್ಲೂಕಿನ ಅರೆಬೈಲ್ ಘಟ್ಟದ ಸಮೀಪ ಹಣ್ಣು, ತರಕಾರಿ ತುಂಬಿದ್ದ ಲಾರಿ ಬುಧವಾರ ನಸುಕಿನ ಜಾವ ಪಲ್ಟಿಯಾಗಿ, ಅದರಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ.
ಫಯಾಜ್ ಜಮಖಂಡಿ, ವಸಿಂ ಮುಡಗೇರಿ, ಇಜಾಜ್ ಮುಲ್ಲಾ, ಸಾದಿಕ್ ಫರಾದ್, ಗುಲಾಂ ಜವಳಿ, ಇಮ್ತಿಯಾಜ್ ಮುಳಕೇರಿ, ಅಲ್ಜಾಜ್ ಮಂಡಕ್ಕಿ, ಜಿಲಾನಿ ಜಕಾತಿ, ಅಸ್ಲಾಂ ಬೆಣ್ಣೆ, ಜಲಾಲ್ ಬಾಷಾ ಮೃತರು.
ಮಲ್ಲಿಕ್ ರಿಹಾನ್(22), ಅಪ್ಸರ್‌ಖಾನ್(20), ಅಶ್ರಫ್ ಎಲ್(20), ನಿಜಾಮುದ್ದೀನ್ ಸುಧಾಗರ್(28) ಖಾಜಾ ಹುಸೇನ್(30), ಖಾಜಾ ಮೈನ್(21), ಮಹ್ಮದ್ ಸಾದಿಕ್(21) ಮರ್ದಾನ್ ಸಾಬ್(21), ಇರ್ಫಾನ್ ಗುಡಿಗೇರಿ(18), ಜಾಫರ್ ಸವಣೂರು(28) ಗಾಯಗೊಂಡವರು.
ಕುಮಟಾದಲ್ಲಿ ನಡೆಯುವ ವಾರದ ಸಂತೆಗೆ ಹಾವೇರಿ ಜಿಲ್ಲೆಯ ಸವಣೂರಿನಿಂದ ಯಲ್ಲಾಪುರ ಮಾರ್ಗವಾಗಿ ತರಕಾರಿ ಸಾಗಿಸುವ ವೇಳೆ ದುರ್ಘಟನೆ ನಡೆದಿದೆ. ಮೃತರೆಲ್ಲರೂ ತರಕಾರಿ ವ್ಯಾಪಾರಿಗಳು ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.
ಲಾರಿಯಲ್ಲಿ ತರಕಾರಿ ದಾಸ್ತಾನಿನ ಜೊತೆಗೆ 25ಕ್ಕೂ ಹೆಚ್ಚು ವ್ಯಾಪಾರಿಗಳು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಲಾರಿ ಉರುಳಿದ ಪರಿಣಾಮ 9 ಮಂದಿ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ಕಳಿಸಲಾಗಿದೆ ಎಂದು ಯಲ್ಲಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸಿಎಂ ಕಚೇರಿ ಸಂತಾಪ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.