ಬೆಳಗಾವಿ: 'ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅರ್ಥವಿಲ್ಲ. ಜನರನ್ನು ತೃಪ್ತಿಪಡಿಸಲು ಜಾರಿಗೆ ತಂದ ಯಾವ ಯೋಜನೆಗಳೂ ಕಾರ್ಯರೂಪಕ್ಕೆ ಬರುತ್ತಿಲ್ಲ' ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೂರಿದರು.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ರಾಜ್ಯದಲ್ಲಿ ಈಗ ತುಘಲಕ್ ದರ್ಬಾರ್ ನಡೆದಿದೆ. ಅದು ಮುಂದುವರಿಯಲಿ' ಎಂದರು.
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ನೀಡದ ಕುರಿತ ಪ್ರಶ್ನೆಗೆ, 'ಇದು ಎಲ್ಲರಿಗೂ ಗೊತ್ತಿರುವ ಸಂಗತಿ' ಎಂದು ನಕ್ಕರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.