ADVERTISEMENT

ಮದ್ದೂರಿನಲ್ಲಿ ಹಿಂದೂ ಪರವಾದ ಸಂಘಟನೆಯವರಿಂದ ಕಲ್ಲು ತೂರಾಟ: ‍ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2025, 8:31 IST
Last Updated 8 ಸೆಪ್ಟೆಂಬರ್ 2025, 8:31 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ತುಮಕೂರು: ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಸಮಯದಲ್ಲಿ ಕಲ್ಲು ತೂರಾಟ ನಡೆಸಿದವರ ಜತೆ ಹಿಂದೂ ಪರವಾದ ಸಂಘಟನೆಯವರು ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಘಟನೆಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ತನಿಖೆಗೆ ಒಳಪಡಿಸಿದ್ದಾರೆ. ಅದರಲ್ಲಿ ಯಾರೆಲ್ಲ ಸೇರಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ ಎಂಬುದು ಗೊತ್ತಿಲ್ಲ. ಹಿಂದೂ ಪರವಾದ ಸಂಘಟನೆಯವರು ಎಂದು ಪೊಲೀಸರು ಹೇಳುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಸತ್ಯಾಂಶ ಗೊತ್ತಾಗಲಿದೆ’ ಎಂದು ತಿಳಿಸಿದರು.

ADVERTISEMENT

ಶಾಂತಿ ಕಾಪಾಡಲು ಪೊಲೀಸರು ಒಂದು ಹಂತದವರೆಗೆ ಪ್ರಯತ್ನಿಸಿದ್ದಾರೆ. ಸಂಘಟನೆಯವರ ಮನವೊಲಿಸಿದ್ದಾರೆ. ಅವರ ಕೈ ಮೀರಿದಾಗ ಲಾಠಿ ಪ್ರಹಾರ ಮಾಡಿದ್ದಾರೆ. ಈಗಾಗಲೇ ಬಂಧನಕ್ಕೆ ಒಳಗಾದವರು ಕಲ್ಲು ತೂರಾಟ ನಡೆಸಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.