ಮೃತದೇಹ ಪತ್ತೆ ಕಾರ್ಯಾಚರಣೆಯಲ್ಲಿ ನಿರತ ಪೊಲೀಸರು
ಕೊರಟಗೆರೆ (ತುಮಕೂರು): ಮಹಿಳೆಯನ್ನು ಕೊಲೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿ ಅಂಗಾಂಗಗಳನ್ನು ತಾಲ್ಲೂಕಿನ ಹೊಳವನಹಳ್ಳಿ, ಕೋಳಾಲ ಹಾಗೂ ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ವಿವಿಧೆಡೆ ಎಸೆಯಲಾಗಿದೆ.
ಮಹಿಳೆ ದೇಹದ ಭಾಗಗಳನ್ನು ಪ್ಲಾಸ್ಟಿಕ್ ಕವರ್‌ನಲ್ಲಿ ತುಂಬಿ ತಾಲ್ಲೂಕಿನ ಒಟ್ಟು ಐದು ಕಡೆ ಎಸೆಯಲಾಗಿದೆ. ಚಿಂಪುಗಾನಹಳ್ಳಿ ಬಳಿ ಗುರುವಾರ ನಾಯಿಯೊಂದು ಪ್ಲಾಸ್ಟಿಕ್ ಕವರ್ ಎಳೆದಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಸ್ಥಳಕ್ಕೆ ಶ್ವಾನದಳ ಕರೆಸಿ ಪರಿಶೀಲಿಸಿದ್ದಾರೆ.
ಕೊಲೆಯಾದ ಮಹಿಳೆಯ ಹೆಸರು, ವಿವರ ಲಭ್ಯವಾಗಿಲ್ಲ. ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬ ಮಾಹಿತಿಯೂ ತಿಳಿದು ಬಂದಿಲ್ಲ. ರುಂಡ ಸೇರಿದಂತೆ ದೇಹದ ಇನ್ನೂ ಕೆಲವು ಭಾಗಗಳು ದೊರೆತಿಲ್ಲ. ಮೃತದೇಹದ ಉಳಿದ ಭಾಗಗಳಿಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.