ನವದೆಹಲಿ: ಬೆಂಗಳೂರು–ಚೆನ್ನೈ ಕೈಗಾರಿಕಾ ಕಾರಿಡಾರ್‌ನ ಭಾಗವಾದ ತುಮಕೂರು ಕೈಗಾರಿಕಾ ಟೌನ್‌ಶಿಪ್‌ನ ಕಾಮಗಾರಿ 2026–27ರಲ್ಲಿ ಪೂರ್ಣಗೊಳ್ಳಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವ ಜಿತಿನ ಪ್ರಸಾದ ತಿಳಿಸಿದರು.
ಲೋಕಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು, ‘₹1,701 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಈ ಯೋಜನೆಗೆ 2020ರಲ್ಲಿ ಅನುಮೋದನೆ ನೀಡಲಾಗಿತ್ತು. ವಿಶೇಷ ಉದ್ದೇಶದ ಘಟಕಕ್ಕೆ (ಎಸ್‌ಪಿವಿ) ರಾಜ್ಯ ಸರ್ಕಾರ 1668 ಎಕರೆ ಜಾಗ ಹಸ್ತಾಂತರ ಮಾಡಿದೆ. ಕೇಂದ್ರ ಸರ್ಕಾರವು ₹586 ಕೋಟಿ ಬಿಡುಗಡೆ ಮಾಡಿದೆ. ಇದರ ಕಾಮಗಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2023ರಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು. ರಸ್ತೆ, ಸಣ್ಣ ಸೇತುವೆ, ನೀರು ಸಂಸ್ಕರಣಾ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳು ಪ‍್ರಗತಿಯಲ್ಲಿವೆ. ಆಹಾರ ಉತ್ಪನ್ನಗಳು, ಜವಳಿ ಮತ್ತು ಉಡುಪುಗಳು, ಎಲೆಕ್ಟ್ರಾನಿಕ್ಸ್, ಆಟೋ ಘಟಕಗಳು, ಔಷಧೀಯ ವಸ್ತುಗಳು, ರಾಸಾಯನಿಕ ಕೈಗಾರಿಕೆಗಳು ಸ್ಥಾಪನೆಯಾಗಲಿವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.