ADVERTISEMENT

ತುಮಕೂರು ಕ್ಷೇತ್ರ ವಾಪಸ್‌ಗೆ: ಪರಮೇಶ್ವರ ಮನವಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2019, 20:15 IST
Last Updated 18 ಮಾರ್ಚ್ 2019, 20:15 IST
.
.   

ಬೆಂಗಳೂರು: ‘ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ತುಮಕೂರು ಲೋಕಸಭಾ ಕ್ಷೇತ್ರವನ್ನು ವಾಪಸು ಪಡೆಯುವ ಸಂಬಂಧ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ’ ಎಂದು ಉಪ‌ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

‘ರಾಜ್ಯದ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸಂಸದರಿದ್ದಾರೆ. ಈ ಕ್ಷೇತ್ರಗಳ ಅಭ್ಯರ್ಥಿ ಬದಲಿಸುವುದು ಬೇಡ ಎಂದು ತೀರ್ಮಾನಿಸಲಾಗಿತ್ತು. ಆದರೆ, ತುಮಕೂರು ಕ್ಷೇತ್ರ ಬಿಟ್ಟುಕೊಟ್ಟಾಗ ಅಸಮಾಧಾನ ಆಗಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲ್ಲುವ ಪರಿಸ್ಥಿತಿ ಇದೆ. ಈ ವಿಷಯವನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ’ ಎಂದರು.

‘ಜೆಡಿಎಸ್‌ ವರಿಷ್ಠ ದೇವೇಗೌಡರು ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರಲ್ಲೂ ಮನವಿ ಮಾಡಿದ್ದೇನೆ. ಅವರಿಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಕ್ಷೇತ್ರದಲ್ಲಿ ದೇವೇಗೌಡರೇ ಕಣಕ್ಕಿಳಿಯುವುದಾರೆ ಸ್ವಾಗತ’ ಎಂದರು.

ADVERTISEMENT

‘ಕ್ಷೇತ್ರ ಹಂಚಿಕೆಯಲ್ಲಿ ಪರಮೇಶ್ವರ ಅವರ ಪ್ರಶ್ನೆ ಬರುವುದಿಲ್ಲ. ಮೈತ್ರಿ ಮುಂದುವರೆಯಬೇಕು. ಹೊಂದಾಣಿಕೆಯಲ್ಲಿ ಪ್ರಾಮಾಣಿಕತೆ ತೋರಿದರೆ ಗೆಲ್ಲಲು ಸಾಧ್ಯ. ಸುಲಭವಾಗಿ ಗೆಲ್ಲುವ ಸೀಟುಗಳನ್ನು ಬುದ್ದಿವಂತಿಕೆಯಿಂದ ಹಂಚಿಕೊಳ್ಳಬೇಕು’‍ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.