ಎನ್. ಎಸ್. ಬೋಸರಾಜು
ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ಗಳ ದುರಸ್ತಿಗೆ ₹48 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ. 50 ಟನ್ ತೂಕದ ಒಂದು ಗೇಟ್ ಸಿದ್ಧವಾಗಿದೆ. ನಿರಂತರ ಮಳೆಯಿಂದಾಗಿ ಅಳವಡಿಕೆ ಸಾಧ್ಯವಾಗಿಲ್ಲ ಎಂದು ವಿಧಾನಪರಿಷತ್ ಸಭಾನಾಯಕ ಎನ್.ಎಸ್. ಬೋಸರಾಜು ಹೇಳಿದರು.
ಕ್ರಸ್ಟ್‌ಗೇಟ್‌ಗಳು ಬಾಗಿರುವ ಬಗ್ಗೆ ವಿಧಾನಪರಿಷತ್‌ನ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ಬಿಜೆಪಿಯ ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಿದ ಅವರು, ‘ತುಂಗಭದ್ರಾ ಜಲಾಶಯ ಯೋಜನೆಯ ಲಾಭ ಪಡೆಯುವ ರಾಜ್ಯಗಳನ್ನು ಬಿಟ್ಟು ಬೇರೆಯವರು ಮಂಡಳಿಯ ಅಧಿಕಾರಿಗಳಾಗಿರಬೇಕು ಎನ್ನುವ ನಿಯಮವಿದೆ. ಆದರೆ, ತುಂಗಭದ್ರಾ ಮಂಡಳಿಯಲ್ಲಿ ಆಂಧ್ರದವರೇ ಅಧ್ಯಕ್ಷರಾಗಿದ್ದಾರೆ. ಮೂರು ರಾಜ್ಯಗಳು ಹಾಗೂ ಮಂಡಳಿ ಅನುಮತಿ ಪಡೆದು ಕೆಲಸ ಮಾಡಬೇಕು. ಈ ವಿಚಾರದಲ್ಲಿ ಕರ್ನಾಟಕವೊಂದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ’ ಎಂದರು.
ವರ್ಷದ ಹಿಂದೆಯೇ ಉಳಿದ ಗೇಟುಗಳನ್ನು ಬದಲಾಯಿಸುವಂತೆ ತಜ್ಞರ ಸಮಿತಿ ಸಲಹೆ ನೀಡಿದ್ದರೂ, ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ರೈತ ವಿರೋಧಿ ನಡೆ ಅನುಸರಿಸುತ್ತಿದೆ. 105 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಕೇವಲ 80 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲಾಗಿದೆ. ಗೇಟು ದುರಸ್ತಿಯಾಗಿ ನೀರು ಬಿಡದಿದ್ದರೆ ಜಲಾಶಯವನ್ನೇ ನಂಬಿ ಬದುಕುವ ರೈತರು ಏನು ಮಾಡಬೇ. ಕೂಡಲೇ ಸರ್ಕಾರ ಕ್ರಮವಹಿಸಬೇಕು ಎಂದರು. ಅದಕ್ಕೆ ಛಲವಾದಿ ನಾರಾಯಣಸ್ವಾಮಿ, ಎನ್.ರವಿಕುಮಾರ್, ಪಿ.ಎಚ್.ಪೂಜಾರ್ ಧ್ವನಿಗೂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.