ADVERTISEMENT

ಸುರಂಗ ರಸ್ತೆ | ರಾಜಕೀಯ ಉದ್ದೇಶದಿಂದ ಬಿಜೆಪಿ ವಿರೋಧ: ಸಿಎಂ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ನವೆಂಬರ್ 2025, 14:22 IST
Last Updated 2 ನವೆಂಬರ್ 2025, 14:22 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: 'ಬೆಂಗಳೂರಿನಲ್ಲಿ ಸುರಂಗ ರಸ್ತೆ ಯೋಜನೆ ಬಗ್ಗೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಭಾನುವಾರ) ಹೇಳಿಕೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಹೇಳಿಕೆಯನ್ನು ಅಧಿಕೃತ ಫೇಸ್‌ಬುಕ್ ಪುಟದಲ್ಲಿ ನೀಡಲಾಗಿದೆ.

ADVERTISEMENT

'ಯೋಜನೆ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಉದ್ದೇಶದಿಂದ ವಿರೋಧಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಯನ್ನು ಹೋಗಲಾಡಿಸುವ ಈ ಯೋಜನೆಗೆ ವಿರೋಧ ಏಕೆ ವ್ಯಕ್ತವಾಗಬೇಕು? ಇದೇ ರೀತಿಯ ಸುರಂಗ ಯೋಜನೆಗಳನ್ನು ಅನೇಕ ದೇಶದಲ್ಲಿಯೂ ಕೈಗೊಳ್ಳಲಾಗಿದೆ. ಅಲ್ಲಿನ ಜನರು ಇದನ್ನು ವಿರೋಧಿಸಿಲ್ಲ' ಎಂದು ಉಲ್ಲೇಖಿಸಿದ್ದಾರೆ.

'ಸುರಂಗ ಯೋಜನೆಯನ್ನು ಕಾರು, ಬಸ್, ದ್ವಿಚಕ್ರ ವಾಹನ ಸವಾರರು ಹೀಗೆ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲೆಂದು ಕೈಗೊಳ್ಳಲಾಗುತ್ತಿದೆ' ಎಂದು ಅವರು ತಿಳಿಸಿದ್ದಾರೆ.

'ಸುರಂಗ ರಸ್ತೆ ಬಗ್ಗೆ ಉಪಮುಖ್ಯಮಂತ್ರಿಗಳು ಈಗಾಗಲೇ ಉತ್ತರ ನೀಡಿದ್ದಾರೆ. ಯೋಜನೆಯ ಬಗ್ಗೆ ವಿರೋಧ ಪಕ್ಷದ ಕಳವಳಗಳನ್ನು ಪರಿಶೀಲಿಸಿ ಒಮ್ಮತಕ್ಕೆ ಬರಲು ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು' ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.