
ಈ ದಿನದ ಪ್ರಮುಖ 10 ಸುದ್ದಿಗಳು
ರಾಜ್ಯ, ರಾಷ್ಟ್ರೀಯ, ವಿದೇಶ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ...
ನಟ ರಾಜ್‌ಕುಮಾರ್
ಚೆನ್ನೈ: ಕನ್ನಡದ ಹಿರಿಯ ನಟ ರಾಜ್‌ಕುಮಾರ್ ಅಪಹರಣ ಪ್ರಕರಣದಲ್ಲಿ 9 ಜನರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ತಾಳವಾಡಿ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಸುಪ್ರೀಂ ಕೋರ್ಟ್ ಹಾಗೂ ಪಠ್ಯದ ಚಿತ್ರ
ನವದೆಹಲಿ: ಎನ್‌ಸಿಇಆರ್‌ಟಿ 8ನೇ ತರಗತಿಯ ಪಠ್ಯದಲ್ಲಿ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ವಿಷಯವನ್ನು ಸೇರಿಸಿರುವ ಕುರಿತು ಸ್ವಯಂಪ್ರೇರಿತ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರ್ಧರಿಸಿದೆ.
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ (ಎನ್‌ಸಿಇಆರ್‌ಟಿ) ಈ ಕ್ರಮವು ನ್ಯಾಯಾಂಗ ವ್ಯವಸ್ಥೆಗೆ ಕಳಂಕ ತರುವ 'ಉದ್ದೇಶಪೂರ್ವಕ' ಹಾಗೂ 'ಲೆಕ್ಕಾಚಾರದ' ಕ್ರಮದಂತೆ ತೋರುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು ಹೇಳಿದೆ.
ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ‘ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವನ್ನು ನಿಲ್ಲಿಸಿದ್ದು ನಾನೇ’ ಎಂದು ಪುನರುಚ್ಚರಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಪಾಕ್ ಪ್ರಧಾನಿ ಷರೀಫ್ ಬದುಕಿ ಉಳಿದದ್ದೇ ನನ್ನಿಂದ’ ಎಂದು ಹೇಳಿಕೊಂಡಿದ್ದಾರೆ.
ಬೆಂಜಮಿನ್ ನೆತನ್ಯಾಹು ಮತ್ತು ನರೇಂದ್ರ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಬಳಿಕ ಎರಡನೇ ಬಾರಿಗೆ ಇಸ್ರೇಲ್‌ಗೆ ಭೇಟಿ ನೀಡಿದ್ದು, ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
ಕೋಲಾರ: ಗದಗ ಜಿಲ್ಲೆಯಲ್ಲಿ ಕಮಿಷನ್ ಕೇಳಿ ಶಾಸಕರು ಲೋಕಾಯುಕ್ತ ಬಲೆಗೆ ಬಿದ್ದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಬ್ಬರು, ಇಬ್ಬರು ಶಾಸಕರು ಸಿಗುತ್ತಾರೆ. ಭೂಮಿಪೂಜೆ ನೆಪದಲ್ಲಿ ಗುತ್ತಿಗೆದಾರರ ಮೇಲೆ ಪರ್ಸೆಂಟೇಜ್ ವಿಚಾರವಾಗಿ ದೌರ್ಜನ್ಯ ಎಸಗುವ ಅಂಥ ಶಾಸಕರು ಮೂರೂ ಪಕ್ಷಗಳಲ್ಲಿ ಇದ್ದು, ಅವರ ಹೆಸರನ್ನು ಮುಖ್ಯಮಂತ್ರಿ ಕೇಳಿದರೆ ಬಹಿರಂಗಪಡಿಸುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹೇಳಿದರು.
ವಿಜಯಪುರ: ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರೈತರಿಗೆ ಪ್ರತಿ ಟನ್‌ಗೆ ₹50 ಆರ್ಥಿಕ ನೆರವಿನ ಮೊತ್ತ ₹300 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ನಗದು ಹಣ
ಭುವನೇಶ್ವರ: ಲಂಚ ಪ್ರಕರಣದಲ್ಲಿ ಬಂಧಿಸಲಾಗಿದ್ದ ಒಡಿಶಾ ಗಣಿ ಇಲಾಖೆ ಅಧಿಕಾರಿಯ ಮನೆಗಳಲ್ಲಿ ₹ 4.27 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ನೋಟಿನ ಕಂತೆಗಳನ್ನು ಟ್ರಾಲಿ ಬ್ಯಾಗ್‌ಗಳಲ್ಲಿ ತುಂಬಿಸಿಡಲಾಗಿತ್ತು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ‘ಇದು ರಾಜ್ಯ ಭ್ರಷ್ಟಾಚಾರ ನಿಗ್ರಹ ದಳ ದಾಳಿ ನಡೆಸಿದ ಪ್ರಕರಣವೊಂದರಲ್ಲಿ ಈವರೆಗೆ ವಶಪಡಿಸಿಕೊಂಡ ಅತಿಹೆಚ್ಚು ಪ್ರಮಾಣದ ನಗದು’ ಜಾಗೃತ ದಳದ ನಿರ್ದೇಶಕ ಯಶ್ವಂತ್ ಜೇತ್ವಾ ಅವರು ತಿಳಿಸಿದ್ದಾರೆ.
ನವದೆಹಲಿ: ಗಾಜಾ ನರಮೇಧದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಅಕ್ಟೋಬರ್ 7ರಂದು ಇಸ್ರೇಲ್‌ನಲ್ಲಿ ನಡೆದ ದಾಳಿಯ ಕುರಿತು ಜಾಣ ಮರೆವು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಪ್ರಿಯಾಂಕಾ ಗಾಂಧಿ ಅವರನ್ನು ‘ಭಾರತದ ರಾಜಕೀಯದ ಮಹಿಳಾ ಘಜನಿ’ ಎಂದು ಕರೆದಿದೆ.
ವಿಜಯ್ ದೇವರಕೊಂಡ, ನಟಿ ರಶ್ಮಿಕಾ ಮಂದಣ್ಣ
ಪ್ರೀತಿಯನ್ನು ರಹಸ್ಯವಾಗಿಡಬೇಕೆ ಅಥವಾ ಅದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳಬೇಕೆ ಎಂಬುದು ಪ್ರತಿಯೊಬ್ಬರ ವೈಯಕ್ತಿಕ ನಿರ್ಧಾರ. ಅದು, ತನ್ನ ಜೊತೆಗಾರರ ಹಿತಾಸಕ್ತಿಯನ್ನು ಕಾಪಾಡುವಂತಿರಬೇಕು. ದಕ್ಷಿಣ ಭಾರತದ ಪ್ರಮುಖ ಸಿನಿಮಾ ತಾರೆಯರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಫೆಬ್ರುವರಿ 26ರಂದು ಹಸೆಮಣೆ ಏರಲು ಸಜ್ಜಾಗುತ್ತಿದ್ದಾರೆ. ಈ ಇಬ್ಬರ ಪ್ರೀತಿಯು ಈ ಕಾಲದ ಅನೇಕ ಪ್ರೇಮಿಗಳಿಗೆ ಮಾದರಿ ಎಂದರೆ ತಪ್ಪಾಗಲಾರದು.
ಹುಬ್ಬಳ್ಳಿ: ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಜಮ್ಮು–ಕಾಶ್ಮೀರ ತಂಡವು ಉತ್ತಮ ಬ್ಯಾಟಿಂಗ್ ಮೂಲಕ ಎರಡನೇ ದಿನವೂ ಮೇಲುಗೈ ಸಾಧಿಸಿದೆ. ಮೊದಲ ದಿನ ಶುಭಂ ಪುಂಡಿರ್ ಅವರ ಶತಕದ ನೆರವಿನಿಂದ 87 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 284 ರನ್ ಗಳಿಸಿದ್ದ ಜಮ್ಮು– ಕಾಶ್ಮೀರ ತಂಡವು, ಎರಡನೇ ದಿನವೂ ಸಂಘಟಿತ ಬ್ಯಾಟಿಂಗ್ ಪ್ರದರ್ಶನ ತೋರಿಸಿತು. 156 ಓವರ್‌ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 527 ರನ್ ಗಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.