ADVERTISEMENT

ಟ್ವಿಟರ್‌ ಅರ್ಜಿ: ಕೇಂದ್ರಕ್ಕೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 26 ಜುಲೈ 2022, 21:08 IST
Last Updated 26 ಜುಲೈ 2022, 21:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ-2000ದ ಕಲಂ 69ಎ ಗೆ ವಿರುದ್ಧವಾಗಿರುವ 1,400ಕ್ಕೂ ಹೆಚ್ಚು ಟ್ವಿಟರ್ ಖಾತೆಗಳನ್ನು ಬ್ಲಾಕ್ ಮಾಡಬೇಕು’ ಎಂಬ ನೋಟಿಸ್‌ಗಳನ್ನು ಪ್ರಶ್ನಿಸಿ ‘ಟ್ವಿಟರ್’ ಕಂಪನಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

‘ಟ್ವಿಟರ್’ ಕಂಪನಿಯ ಬೆಂಗಳೂರಿನ ಪ್ರತಿನಿಧಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆಯನ್ನು ಆಗಸ್ಟ್‌ 25ಕ್ಕೆ ಮುಂದೂಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.