ಬೆಂಗಳೂರು: ಕೆಲವು ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸುವಂತೆ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ಹೊರಡಿಸಿದ್ದ ಆದೇಶವನ್ನು ಜಾರಿ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಲಾದ ದಾಖಲೆಗಳನ್ನು ಸಲ್ಲಿಸಲು ಅರ್ಜಿದಾರ ‘ಎಕ್ಸ್ ಕಾರ್ಪ್‘ ಸಂಸ್ಥೆಗೆ (ಟ್ವಿಟ್ಟರ್) ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ.
ಕೆಲವು ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ್ದ ರಿಟ್ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
‘ಇದು ಕೊನೆಯ ಮತ್ತು ಅಂತಿಮ ಅವಕಾಶ‘ ಎಂದು ಅರ್ಜಿದಾರರನ್ನು ಎಚ್ಚರಿಸಿದ ನ್ಯಾಯಪೀಠ, ₹ 50 ಲಕ್ಷ ಮೊತ್ತದ ದಂಡ ಪಾವತಿಗೆ ಈ ಹಿಂದೆ ನೀಡಿದ್ದ ತಡೆ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.