ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಮಕ್ಕಳಲ್ಲಿ ‘ಕಪ್ಪು ಶಿಲೀಂಧ್ರ’ (ಬ್ಲ್ಯಾಕ್ ಫಂಗಸ್) ಸೋಂಕು ತಗುಲಿರುವುದು ಪತ್ತೆಯಾಗಿದೆ.
ಬಳ್ಳಾರಿ ಜಿಲ್ಲೆಯ 11 ವರ್ಷದ ಬಾಲಕಿ ಹಾಗೂ ಚಿತ್ರದುರ್ಗ ಜಿಲ್ಲೆಯ 14 ವರ್ಷದ ಬಾಲಕ ಸೋಂಕಿಗೆ ತುತ್ತಾಗಿದ್ದಾರೆ.
ಸೋಂಕಿನ ಬಗ್ಗೆ ಹೆಚ್ಚು ಅರಿವಿಲ್ಲದ ಕಾರಣಕ್ಕೆ ಈ ಇಬ್ಬರನ್ನು ಆಸ್ಪತ್ರೆಗೆ ತಡವಾಗಿ ದಾಖಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
‘ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಇಬ್ಬರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದಲ್ಲಿ ಈವರೆಗೆ 1,250 ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ. ಸದ್ಯ 1,193 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 18 ಮಂದಿ ಗುಣಮುಖರಾಗಿದ್ದರೆ 39 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.