ADVERTISEMENT

ಸಿ.ಎಂ ಕಚೇರಿ: ಇಬ್ಬರು ಅಧಿಕಾರಿಗಳಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 20:24 IST
Last Updated 24 ನವೆಂಬರ್ 2021, 20:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಇಬ್ಬರು ಅಧಿಕಾರಿಗಳಿಗೆ ಕೋವಿಡ್‌–19 ದೃಢಪಟ್ಟಿದ್ದು, ಇತರ ಸಿಬ್ಬಂದಿಯನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ.

ಕೋವಿಡ್‌ ದೃಢಪಟ್ಟಿರುವ ಅಧಿಕಾರಿಗಳು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಈ ಕಾರಣಕ್ಕೆ ‘ಕೃಷ್ಣಾ’ದಲ್ಲಿ ಮಂಗಳವಾರ ಮತ್ತು ಬುಧವಾರ ನಿಗದಿಯಾಗಿದ್ದ ಎಲ್ಲ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿಯವರು ರದ್ದುಪಡಿಸಿ, ರೇಸ್‌ಕೋರ್ಸ್‌ನ ಅಧಿಕೃತ ನಿವಾಸದಲ್ಲಿ ಸಭೆಗಳನ್ನು ನಡೆಸಿದರು. ‘ಕೃಷ್ಣಾ’ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ. ಇಲ್ಲಿ ಪೊಲೀಸರು ಸೇರಿ ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT