ಕಲಬುರ್ಗಿ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್–19 ಸೋಂಕು ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಇಬ್ಬರು ಸಾವಿಗೀಡಾಗಿದ್ದು, 20 ಜನರಿಗೆ ಸೋಂಕು ಕಾಣಿಸಿಕೊಂಡಿದೆ.
53 ವರ್ಷದ ಪುರುಷ ಹಾಗೂ 48 ವರ್ಷದ ಪುರುಷರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಕೋವಿಡ್ ವಾರ್ಡ್‌ನಲ್ಲಿ ನಿಗಾದಲ್ಲಿ ಇರಿಸಿದ್ದ ವೇಳೆಯೇ ಇಬ್ಬರೂ ಸಾವಿಗೀಡಾದರು ಎಂದು ರಾಜ್ಯ ಆರೋಗ್ಯ ಇಲಾಖೆ ಪ್ರಕಟಿಸಿದ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಮರಣ ಹೊಂದಿದ 53 ವರ್ಷದ ವ್ಯಕ್ತಿ ಕಲಬುರ್ಗಿಯ ಎಂ.ಎಸ್.ಕೆ. ಮಿಲ್ ನಿವಾಸಿ, 48 ವರ್ಷದ ವ್ಯಕ್ತಿ ಚಿಂಚೋಳಿ ತಾಲ್ಲೂಕಿನ ಕೆರೊಳ್ಳಿ ಗ್ರಾಮದವರು.
ಇಲ್ಲಿವರೆಗೆ ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ 10 ಜನ ಸಾವಿಗೀಡಾಗಿದಂತಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 816ಕ್ಕೆ ಏರಿಕೆಯಾಗಿದ್ದು, ಶುಕ್ರವಾರ 60 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.