ರಾಣೆಬೆನ್ನೂರು (ಹಾವೇರಿ ಜಿಲ್ಲೆ): ತಾಲ್ಲೂಕಿನ ನೂಕಾಪುರ ಗ್ರಾಮದ ರೈತ ಸಕ್ರೆಪ್ಪ ತಾವರೆಪ್ಪ ರಾಠೋಡ (45) ಹಾಗೂ ತಾಲ್ಲೂಕಿನ ಚಳಗೇರಿ ಗ್ರಾಮದ ರೈತ ನಾಗರಾಜ ನೀಲಕಂಠಪ್ಪ ಹೊನ್ನಕ್ಕಳವರ (32) ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳೆ ಹಾನಿಯಾಗಿ ಕೃಷಿ ಚಟುವಟಿಕೆಗೆ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಈ ಎರಡು ಪ್ರತ್ಯೇಕ ಪ್ರಕರಣದ ದೂರಿನಲ್ಲಿ ತಿಳಿಸಲಾಗಿದೆ.
ಪ್ರತಿಭಟನೆ: ಮೃತ ರೈತನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ನಗರದ ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಚಳಗೇರಿಯಲ್ಲಿ ಮೃತ ರೈತನ ಶವವನ್ನು ಬಸ್ ನಿಲ್ದಾಣದ ಬಳಿ ರಸ್ತೆಯಲ್ಲಿ ಇಟ್ಟು ರೈತ ಸಂಘದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.