ಬೆಂಗಳೂರು: ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ ಪಡಿತರವನ್ನು ಏಪ್ರಿಲ್ 1ರಂದೇ ನೀಡಲಾಗುವುದು ಎಂದುಶನಿವಾರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಭಾನುವಾರ ಜನತಾ ಕರ್ಫ್ಯೂ ಇರುವುದರಿಂದ ನ್ಯಾಯಬೆಲೆ ಅಂಗಡಿಗಳೂ ಮುಚ್ಚಿರಲಿವೆ. ಆದರೆ, ಸೋಮವಾರ ಮತ್ತು ಮಂಗಳವಾರ ಬೆಳಿಗ್ಗೆ 7ರಿಂದ ರಾತ್ರಿ 9 ಗಂಟೆವರೆಗೆ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.