ADVERTISEMENT

ರಾಜ್ಯದಲ್ಲಿ ಹೂಡಿಕೆಗೆ ಮಾಡಲು ಯು.ಎ.ಇ ಆಸಕ್ತಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 8:24 IST
Last Updated 18 ಫೆಬ್ರುವರಿ 2019, 8:24 IST
ಮೂಲಸೌಕರ್ಯ ಅಭಿವೃದ್ಧಿ– ಸಾಂದರ್ಭಿಕ ಚಿತ್ರ
ಮೂಲಸೌಕರ್ಯ ಅಭಿವೃದ್ಧಿ– ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕದಲ್ಲಿ ಆಹಾರ ಭದ್ರತೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಕಡಿಮೆ ವೆಚ್ಚದ ವಸತಿ ನಿರ್ಮಾಣ ಯೋಜನೆಗಳಲ್ಲಿ ಹೂಡಿಕೆ ಮಾಡಲು ಯು.ಎ.ಇ ಉತ್ಸುಕವಾಗಿದೆ ಎಂದು ಯು.ಎ.ಇ ರಾಯಭಾರಿ ಡಾ.ಅಹಮದ್ ಎ.ಆರ್.ಅಲ್‍ಬನ್ನಾ ಎಂದು ಹೇಳಿದರು.

ಸೋಮವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದರು.

ಕಳೆದ ಹಲವು ವರ್ಷಗಳಲ್ಲಿ ಕರ್ನಾಟಕದಲ್ಲಿ ಕೃಷಿ, ನೀರಾವರಿ, ಆಟೋಮೊಬೈಲ್, ಡಿಜಿಟಲ್ ಮೆಡಿಸಿನ್ ಮುಂತಾದ ವಲಯಗಳಲ್ಲಿ ಯು.ಎ.ಇ ಮಾಡುತ್ತಿರುವ ಹೂಡಿಕೆಯಲ್ಲಿ ಗಣನೀಯ ಹೆಚ್ಚಳವಾಗಿದೆ. ಮೂಲಭೂತ ಸೌಕರ್ಯ ಅಭಿವೃದ್ಧಿ, ಆಹಾರ ಪಾರ್ಕ್ ಮತ್ತು ಕಡಿಮೆ ವೆಚ್ಚದ ಗೃಹ ನಿರ್ಮಾಣ ಯೋಜನೆಗಳಲ್ಲಿ ಹೂಡಿಕೆ ಮಾಡುವುದನ್ನು ಸ್ವಾಗತಿಸುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದರು.

ADVERTISEMENT

ರಾಜ್ಯದಿಂದ ಉತ್ತಮ ಗುಣಮಟ್ಟದ ಹೂವು, ಹಣ್ಣು ಮತ್ತು ತರಕಾರಿ ಯುರೋಪಿಯನ್ ದೇಶಗಳಿಗೆ ರಫ್ತಾಗುತ್ತಿದ್ದು, ಈ ವಲಯಗಳಲ್ಲಿಯೂ ಹೂಡಿಕೆಯನ್ನು ಸ್ವಾಗತಿಸಲಾಗುವುದು ಎಂದರು.

ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಇತರರು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.