ADVERTISEMENT

ಎಚ್‌1ಎನ್‌1: ರಂಗಕರ್ಮಿ ಮಾಲತಿಗೆ ಕೆಎಂಸಿಯಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2019, 20:10 IST
Last Updated 13 ಮಾರ್ಚ್ 2019, 20:10 IST
ಎಸ್‌.ಮಾಲತಿ
ಎಸ್‌.ಮಾಲತಿ   

ಉಡುಪಿ: ಹಿರಿಯ ರಂಗಕರ್ಮಿ ಸಾಗರದ ಎಸ್‌.ಮಾಲತಿ ಎಚ್‌1ಎನ್‌1 ಜ್ವರದಿಂದ ಬಳಲುತ್ತಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಲತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತಿ ಪುರುಷೋತ್ತಮ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಆಸ್ಪತ್ರೆಗೆ ದಾಖಲಾಗಿ 5 ದಿನವಾಯಿತು. ಚಿಕಿತ್ಸೆ ಮುಂದುವರಿದಿದ್ದು ಮಾಲತಿ ಗುಣಮುಖರಾಗುವ ವಿಶ್ವಾಸವಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.