
ಪ್ರಜಾವಾಣಿ ವಾರ್ತೆ
ಬೆಂಗಳೂರು: ಯುಜಿ ಆಯುಷ್ ಸ್ಟ್ರೇ ವೇಕೆನ್ಸಿ ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.
ಸೀಟು ಹಂಚಿಕೆಯಾದವರು ಡಿಸೆಂಬರ್ 20ರೊಳಗೆ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸಂಬಂಧಿಸಿದ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಪಿಜಿ ಆಯುಷ್ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಕೂಡ ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಡಿಸೆಂಬರ್ 22ರಂದು ಮಧ್ಯಾಹ್ನ 3 ಗಂಟೆ ಒಳಗೆ ಶುಲ್ಕ ಪಾವತಿಸಿ, ಅಂದೇ ಸಂಜೆ 6 ಗಂಟೆಯೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.