ADVERTISEMENT

ಯುಜಿಸಿ ಅರ್ಹತೆ ಹೊಂದಿರುವ 1,300 ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 16:02 IST
Last Updated 13 ಫೆಬ್ರುವರಿ 2026, 16:02 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಗೆಟ್ಟಿ ಚಿತ್ರ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಂಪ್ಯೂಟರ್‌ ಸೈನ್ಸ್ ಸೇರಿದಂತೆ 10ರಿಂದ 12 ವಿಷಯಗಳಿಗೆ ಅತಿಥಿ ಉಪನ್ಯಾಸಕರ ಕೊರತೆ ಎದುರಾಗಿದ್ದು, 1,300 ಹುದ್ದೆಗಳು ಖಾಲಿ ಉಳಿದಿವೆ.

ADVERTISEMENT

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತೆ ಹೊಂದಿದವರನ್ನಷ್ಟೇ ಪರಿಗಣಿಸಬೇಕು ಎಂಬ ಹೈಕೋರ್ಟ್ ನಿರ್ದೇಶನದ ಬಳಿಕ, ಯುಜಿಸಿ ಅರ್ಹತೆ ಇಲ್ಲದವರನ್ನು ಕೈಬಿಡಲಾಗಿತ್ತು. ಇದರಿಂದ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸುಮಾರು 6,000 ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಂಡಿದ್ದರು. ಕೆಲ ವಿಷಯಗಳಲ್ಲಿ ಯುಜಿಸಿ ಅರ್ಹತೆ ಪಡೆದ ಅಭ್ಯರ್ಥಿಗಳು ಲಭ್ಯವಿಲ್ಲದೆ ಬೋಧನೆಗೆ ತೊಡಕಾಗಿದೆ.

‘ಅರ್ಹ ಅಭ್ಯರ್ಥಿಗಳ ಲಭ್ಯತೆ ಇಲ್ಲದ ವಿಷಯಗಳಲ್ಲಿ ಯುಜಿಸಿ ಅರ್ಹತೆ ಇಲ್ಲದವರನ್ನು ನೇಮಿಸಲು ಸರ್ಕಾರ ಕೋರ್ಟ್‌ ಅನುಮತಿಯನ್ನು ಕೋರಿದ್ದು, ಕೋರ್ಟ್‌ ನಿರ್ದೇಶನದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.