ಕೆಇಎ
ಬೆಂಗಳೂರು: ಯುಜಿಸಿಇಟಿ–25 ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.
ಈ ಕುರಿತಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೆಇಎ, 'UGCET-25 ಸಂಬಂಧಿಸಿದಂತೆ ಎಲ್ಲ ನಾಲ್ಕು ವಿಷಯಗಳ 16 ಆವೃತ್ತಿಗಳ (ವರ್ಷನ್) ಕೀ ಉತ್ತರಗಳನ್ನು ಕೆಇಎ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಏ.22ರೊಳಗೆ ಆನ್‌ಲೈನ್ ಮೂಲಕ ಸಲ್ಲಿಸಬಹುದು' ಎಂದು ತಿಳಿಸಿದೆ.
'ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ಏ.16 ಮತ್ತು 17ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ಆವೃತ್ತಿಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ' ಎಂದಿದೆ.
'ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ಏ.22ರ ಸಂಜೆ 5:00ರೊಳಗೆ ಸಲ್ಲಿಸಬಹುದು' ಎಂದೂ ಹೇಳಿದೆ.
'ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್. ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಪರಿಶೀಲಿಸಿ ತೀರ್ಮಾನಿಸುವ ಕೀ ಉತ್ತರಗಳು ಅಂತಿಮವಾಗಿರುತ್ತವೆ' ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.