ಕೆಇಎ
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಇದೇ 16 ಮತ್ತು 17ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಭಾನುವಾರ ಬಿಡುಗಡೆ ಮಾಡಿದೆ. ಈ ಬಾರಿ 3,30,875 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.
ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ‘ಯುಜಿಸಿಇಟಿ–25 ಪ್ರವೇಶ ಪತ್ರ’ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ ತಮ್ಮ ಲಾಗಿನ್ ಐಡಿ ಸಂಖ್ಯೆ, ಹೆಸರು ದಾಖಲಿಸುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
‘ಇದೇ ಮೊದಲ ಬಾರಿಗೆ ಒಟಿಪಿ ಮತ್ತು ಮುಖಚಹರೆ ಆಧಾರಿತ ಲಾಗಿನ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಈ ಬಾರಿ ಪ್ರವೇಶ ಪತ್ರದಲ್ಲಿ ಕ್ಯೂಆರ್ ಕೋಡ್ ನೀಡಲಾಗಿದೆ. ಜತೆಗೆ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಮಾದರಿ ಒಎಂಆರ್ ಶೀಟ್ ಹಾಗೂ ಮಾರ್ಗಸೂಚಿ ಪಟ್ಟಿ– ಹೀಗೆ ಒಟ್ಟು ಎರಡು ಪುಟಗಳಿದ್ದು ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಓದಿಕೊಳ್ಳಬೇಕು. ಮಾದರಿ ಒಎಂಆರ್ ಶೀಟ್ ಅನ್ನೂ ವಿದ್ಯಾರ್ಥಿಗಳು ಅಭ್ಯಾಸಕ್ಕೆ ಬಳಸಬೇಕು. ಆ ಮೂಲಕ, ಪರೀಕ್ಷೆ ಸಂದರ್ಭದಲ್ಲಿ ಆಗುವ ತಪ್ಪುಗಳನ್ನು ತಪ್ಪಿಸಬಹುದು’ ಎಂದು ಅವರು ಸಲಹೆ ನೀಡಿದ್ದಾರೆ.
ಏಪ್ರಿಲ್ 15ರಂದು ನಡೆಯಲಿರುವ ಕನ್ನಡ ಭಾಷಾ ಪರೀಕ್ಷೆಗೂ ಇದೇ ಪ್ರವೇಶ ಪತ್ರ ಅನ್ವಯ ಆಗಲಿದೆ ಎಂದೂ ಅವರು ತಿಳಿಸಿದ್ದಾರೆ.
ಲಿಂಕ್:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.