ADVERTISEMENT

ರೈತರನ್ನು ಸಮಾಧಿ ಮಾಡುವ ಯತ್ನ: ಉಗ್ರಪ್ಪ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2021, 20:28 IST
Last Updated 7 ಫೆಬ್ರುವರಿ 2021, 20:28 IST
ವಿ.ಎಸ್‌.ಉಗ್ರಪ್ಪ
ವಿ.ಎಸ್‌.ಉಗ್ರಪ್ಪ   

ಬೆಂಗಳೂರು: ‘ಕೇಂದ್ರ ಮತ್ತು ರಾಜ್ಯ ಸರ್ಕಾರವು ಕೃಷಿ ವಿರೋಧಿ ಕಾನೂನುಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಸಮಾಧಿ ಮಾಡುವ ಪ್ರಯತ್ನ ನಡೆಸುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಆರೋಪಿಸಿದರು.

ಮಂಜುಶ್ರೀ ಸಾಂಸ್ಕೃತಿಕ ಸೇವಾ ಟ್ರಸ್ಟ್‌ ನಗರದಲ್ಲಿ ಭಾನುವಾರ ಆಯೋಜಿಸಿದ ‘ಸುಗ್ಗಿ ಸಂಭ್ರಮ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

‘ಕೇಂದ್ರ ಸರ್ಕಾರವು ತುಘಲಕ್‌ ದರ್ಬಾರ್‌ ನಡೆಸುತ್ತಿದೆ. ರಾಜ್ಯ ಸರ್ಕಾರವೂ ಕೇಂದ್ರದ ಹಾದಿ ತುಳಿಯುತ್ತಿದ್ದು, ರೈತ ವಿರೋಧಿ ನಿಲುವನ್ನು ತಾಳುತ್ತಿದೆ. ಪ್ರಧಾನಿಯ ಸರ್ವಾಧಿಕಾರಿ ಧೋರಣೆಯಿಂದ ಗ್ರಾಮೀಣ ಭಾರತ ಸಂಕಷ್ಟಕ್ಕೆ ಸಿಲುಕಿದೆ. ಮೋದಿ ಅವರನ್ನು ಈ ಹಿಂದೆ ಆಧುನಿಕ ದುರ್ಯೋಧನ ಎಂದು ಸಂಬೋಧಿಸಿದ್ದೆ. ಅವರು ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವು ದೇಶದ ಎರಡನೇ ಸ್ವಾತಂತ್ರ್ಯ ಹೋರಾಟ’ ಎಂದು ತಿಳಿಸಿದರು.

ADVERTISEMENT

ಜನವಿರೋಧಿ ಕಾಯ್ದೆ

ನಟ ಚೇತನ್ ಮಾತನಾಡಿ, ‘ಕೋವಿಡ್‌ ಕಾರಣ ಜನತೆ ಮನೆಯಲ್ಲಿದ್ದಾಗ ಜನವಿರೋಧಿ ಕಾಯ್ದೆಗಳನ್ನು ತರಲಾಗಿದೆ. ಸಾರ್ವಜನಿಕ ಚರ್ಚೆಗೆ ಅವಕಾಶ ನೀಡದೇ ಏಕಮುಖ ನಿರ್ಧಾರ ಕೈಗೊಳ್ಳಲಾಗಿದೆ. ಇದನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಇದು ಸ್ವಾತಂತ್ರ್ಯ ಹೋರಾಟದ ಬಳಿಕ ನಡೆಸುತ್ತಿರುವ ಬೃಹತ್ ಹೋರಾಟವಾಗಿದೆ. ಭಾರತವು ಅಪಾಯಕಾರಿ ಪರಿಸ್ಥಿತಿ ಎದುರಿಸುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.