ADVERTISEMENT

ಉಕ್ರೇನ್‌ನಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆ: ನೋಡಲ್‌ ಅಧಿಕಾರಿ ನೇಮಕ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 21:41 IST
Last Updated 24 ಫೆಬ್ರುವರಿ 2022, 21:41 IST
ಉಕ್ರೇನ್‌
ಉಕ್ರೇನ್‌   

ಬೆಂಗಳೂರು: ಯುದ್ದಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಭಾರತದ ರಾಯಬಾರಿ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ಜೊತೆ ಸಮನ್ವಯ ಸಾಧಿಸಿ ಕೆಲಸ ಮಾಡಲು ನೋಡಲ್‌ ಅಧಿಕಾರಿಯಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ, ಐಎಫ್‌ಎಸ್‌ ಅಧಿಕಾರಿ ಡಾ. ಮನೋಜ್‌ ರಾಜನ್‌ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಈ ಬಗ್ಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಅವರು ಗುರುವಾರ ರಾತ್ರಿ ಅಧಿಸೂಚನೆ ಹೊರಡಿಸಿದ್ದಾರೆ.

ಮನೋಜ್‌ ರಾಜನ್‌ ಅವರು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ತೊಂದರೆಯಲ್ಲಿರುವ ಕನ್ನಡಿಗರಿಗೆ ಅಗತ್ಯ ನೆರವು ನೀಡಲಿದ್ದಾರೆ. ಅಲ್ಲದೆ, ಸಿಲುಕಿರುವವರನ್ನು ಉಕ್ರೇನ್‌ನಿಂದ ಸ್ಥಳಾಂತರಿಸಲು ಸಾಧ್ಯವಾಗುವ ಎಲ್ಲ ಕೆಲಸಗಳನ್ನು ನಿಭಾಯಿಸಲಿದ್ದಾರೆ.

ADVERTISEMENT

ರಾಜ್ಯ ತುರ್ತು ಕಾರ್ಯಾಚರಣಾ ಕೇಂದ್ರದಲ್ಲಿ 24X7 ಕೆಲಸ ಮಾಡಲಿರುವ ಸಹಾಯವಾಣಿ (080–1070, 080–22340676, ಇ–ಮೇಲ್‌– manoarya@gmail.com, revenuedmkar@gmail.com) ಮೇಲುಸ್ತುವಾರಿಯನ್ನೂ ಅವರು ವಹಿಸಲಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.