ADVERTISEMENT

ಸಚಿವನಾದರೆ ರಾಜ್ಯಕ್ಕೆ ಕೆಲಸ ಮಾಡುವೆ, ಇಲ್ಲವಾದರೆ ಕ್ಷೇತ್ರಕ್ಕೆ ದುಡಿಯುವೆ: ಕತ್ತಿ

​ಪ್ರಜಾವಾಣಿ ವಾರ್ತೆ
Published 18 ಜನವರಿ 2020, 14:24 IST
Last Updated 18 ಜನವರಿ 2020, 14:24 IST
   

ಹುಬ್ಬಳ್ಳಿ: ಸಚಿವನಾದರೆ ರಾಜ್ಯಕ್ಕೆ, ಶಾಸಕನಾಗಿಯೇ ಉಳಿದರೆ ಕ್ಷೇತ್ರಕ್ಕೆ ಕೆಲಸ ಮಾಡುವೆ. ಯಾರ ಬಳಿಯೂ ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸುವುದಿಲ್ಲ. ಅಮಿತ್ ಶಾ ಬಳಿ ಈ ವಿಷಯವನ್ನು ಪ್ರಸ್ತಾಪವೇ ಮಾಡುವುದಿಲ್ಲ ಎಂದು ಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿದರು.

ಅಮಿತ್ ಶಾ ಜೊತೆಗೆ ಡೆನಿಸನ್ ಹೋಟೆಲ್ ನಲ್ಲಿ ಆಯೋಜನೆಯಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿರುವ ಅವರು ಮಾಧ್ಯಮದವರ ಜೊತೆ ಮಾತನಾಡಿ, ಚರ್ಚೆಯಲ್ಲಿ ಪಾಲ್ಗೊಳ್ಳಲು ಇಲ್ಲಿಗೆ ಬಂದಿದ್ದೇನೆ,; ಹೊರತು ಸಚಿವ ಸ್ಥಾನ ಕೇಳಲು ಅಲ್ಲ ಎಂದರು.

ಸಚಿವ ಸಂಪುಟ ವಿಸ್ತರಣೆ ಯಾದರೆ ಸರ್ಕಾರ ಸಂಕಷ್ಟಕ್ಕೆ ಸಿಲುಕುತ್ತದೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ. ಮೂರು ವರ್ಷ ಸರ್ಕಾರ ಭದ್ರವಾಗಿರುತ್ತದೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.