ಬೆಳಗಾವಿ: ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶ್ವಾಸನೆ ನೀಡಿದ್ದು, ಯಾವ ಖಾತೆ ಕೊಟ್ಟರೂ ನಿಭಾಯಿಸುವೆಎಂದು ಶಾಸಕ ಉಮೇಶ ಕತ್ತಿ ಹೇಳಿದರು.
ಬೈಲಹೊಂಗಲ ತಾಲ್ಲೂಕಿನ ಇಂಚಲದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಇಂತಹದ್ದೇ ಖಾತೆ ಬೇಕೆಂದು ಕೇಳಿಲ್ಲ. ಯಾವ ಖಾತೆ ಸಿಕ್ಕರೂ ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಪ್ರಯತ್ನಿಸುವೆಎಂದು ತಿಳಿಸಿದರು.
ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದರು. ಅದರಂತೆ ಅವರು ನಡೆದುಕೊಳುತ್ತಿದ್ದಾರೆ. ಸೋತವರಿಗೆ ಕೊಡಲು ಸಾಧ್ಯವಿಲ್ಲಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.