ಸಚಿವ ಶಿವರಾಜ ತಂಗಡಗಿ
ಕೊಪ್ಪಳ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಬಜೆಟ್ ಸಮತೋಲನವಿಲ್ಲದಂತಾಗಿದೆ. ಕರ್ನಾಟಕದ ಮಟ್ಟಿಗೆ ಇದೊಂದು ನಿರಾಶಯದಾಯಕ ಬಜೆಟ್ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯಿಸಿದ್ದಾರೆ.
ಕೈಗಾರಿಕೆ ಹಾಗೂ ಕೃಷಿ ವಲಯಕ್ಕೆ ಹೆಚ್ಚಿನದ್ದೇನು ನೀಡಿಲ್ಲ. ಎಐ, ಕೌಶಲ್ಯ ಭಾರತ, ತಾಂತ್ರಿಕ ಪ್ರಗತಿ ಬಗ್ಗೆ ಮಾತನಾಡುತ್ತಾರೆ. ಯುವಕರಿಗೆ ಉದ್ಯೋಗ ಹೇಗೆ ಸಿಗುತ್ತದೆ ಎಂಬ ಬಗ್ಗೆ ಉಲ್ಲೇಖವಿಲ್ಲ. ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಮುನ್ನ ಎರಡು ಕೋಟಿ ಜನರಿಗೆ ಉದ್ಯೋಗ ಸೃಜಿಸುವ ಬಗ್ಗೆ ಮಾತನಾಡಿದವರು. ಆ ಬಗ್ಗೆ ಚಕಾರವನ್ನೇ ಎತ್ತುತ್ತಿಲ್ಲ.
ಕರ್ನಾಟಕದ ಬಗ್ಗೆ ನಾವು ಏನನ್ನು ನಿರೀಕ್ಷೆ ಮಾಡಿರಲಿಲ್ಲ. ಎಂದಿನಂತೆ ಈ ಬಾರಿಯೂ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ವಿಪರ್ಯಾಸವೆಂದರೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಹೊಂದಿಲ್ಲ. ರೈತರು, ಮಹಿಳೆಯರು, ಯುವಕರು ಹಾಗೂ ದಲಿತರ ವಿರೋಧಿ ಬಜೆಟ್ ಇದಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಡವರು ಕಣ್ಣೀರು ಹಾಕುವಂತಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.