ADVERTISEMENT

28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಮವಸ್ತ್ರ ಕಡ್ಡಾಯ -ಶಿಕ್ಷಣ ಇಲಾಖೆ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2022, 19:46 IST
Last Updated 26 ಮಾರ್ಚ್ 2022, 19:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಇದೇ 28ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

‘ಈ ವಿಷಯದ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶಗಳನ್ನು ಮಾರ್ಚ್‌ 15ರಂದು ಹೈಕೋರ್ಟ್‌ ಸಿಂಧುಗೊಳಿಸಿದೆ. ಹೀಗಾಗಿ, ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು. ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಧರಿಸುವುದು ಕಡ್ಡಾಯ’ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT