ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆಗೂ ಸಮವಸ್ತ್ರ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2022, 19:31 IST
Last Updated 7 ಏಪ್ರಿಲ್ 2022, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಂತೆ, ಈ ಬಾರಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ.

ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಸಮವಸ್ತ್ರವನ್ನೇ ಧರಿಸಬೇಕು. ಒಂದು ವೇಳೆ ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿಗೆ ಬಂದರೆ ಅಂಥವರಿಗೆ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ. ಸರ್ಕಾರಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ನಿಗದಿಪಡಿಸಿದ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಆಯಾ ಆಡಳಿತ ಮಂಡಳಿ ನಿಗದಿಪಡಿಸಿರುವ ಸಮವಸ್ತ್ರ ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT