ADVERTISEMENT

ಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕುಮಾರಸ್ವಾಮಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜನವರಿ 2025, 5:20 IST
Last Updated 30 ಜನವರಿ 2025, 5:20 IST
   

ಬೆಂಗಳೂರು: ತಿರುಪತಿಯ ಪ್ರಸಿದ್ಧ ವೆಂಕಟೇಶ್ವರಸ್ವಾಮಿ ದೇಗುಲಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸಮೇತ ಭೇಟಿ ನೀಡಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ಉಷೋದಯಕ್ಕೆ ಮುನ್ನ ಕುಟುಂಬ ಸಮೇತ ತಿರುಮಲಕ್ಕೆ ತೆರಳಿ ಕಲಿಯುಗ ಪ್ರತ್ಯಕ್ಷ ದೈವ, ವೈಕುಂಠವಾಸ ಶ್ರೀ ವೆಂಕಟೇಶ್ವರ ಸ್ವಾಮಿ ಅವರ ದರ್ಶನ ಭಾಗ್ಯ ಪಡೆದು ಪುನೀತನಾದೆ' ಎಂದು ತಿಳಿಸಿದ್ದಾರೆ.

ADVERTISEMENT

'2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಗುರಿ, ದೃಢ ಸಂಕಲ್ಪ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದ್ದು, ಪ್ರಧಾನಿಗಳ ಆಶಯದಂತೆ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಅಥವಾ ವೈಜಾಗ್ ಸ್ಟೀಲ್ ಪುನಶ್ಚೇತನಕ್ಕೆ ₹11,400 ಕೋಟಿಗಳ ಬೃಹತ್ ಪ್ಯಾಕೇಜ್ ಘೋಷಿಸಲಾಗಿದೆ. ಇದು ಮೋದಿ ಅವರ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರವಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.

'ಪ್ಯಾಕೇಜ್ ಘೋಷಣೆ ನಂತರ ಇಂದು ಬೆಳಗ್ಗೆ ಬಾಲಾಜಿಯ ದರ್ಶನ ಪಡೆದು ನನ್ನ ಸಹೋದ್ಯೋಗಿ ಹಾಗೂ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಹಾಯಕ ಸಚಿವರಾದ ಭೂಪತಿರಾಜು ಶ್ರೀನಿವಾಸ ವರ್ಮಾ ಅವರೊಂದಿಗೆ ವಿಶಾಖಪಟ್ಟಣಕ್ಕೆ ಭೇಟಿ ನೀಡುತ್ತಿದ್ದೇನೆ' ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.