ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿಗೆ ರಾಜ್ಯ ಕೇಳಿರುವಷ್ಟು ಔಷಧಿಯನ್ನು ಪೂರೈಕೆ ಮಾಡಲು ಸಾಧ್ಯವಾಗಿಲ್ಲ, ಮುಂಬರುವ ದಿನಗಳಲ್ಲಿ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪು ಶಿಲೀಂಧ್ರಕ್ಕೆ 20 ಸಾವಿರ ವಯಲ್ಸ್ ಔಷಧ ನೀಡುವಂತೆ ರಾಜ್ಯ ಸರ್ಕಾರ ಇದೇ 14 ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಈಗಾಗಲೇ 1050 ವಯಲ್ಸ್ ಕಳಿಸಲಾಗಿದೆ. ಉಳಿದದ್ದನ್ನು ಆದಷ್ಟು ಬೇಗನೆ ಕಳಿಸುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.