ADVERTISEMENT

ಒಗ್ಗಟ್ಟು ಮುಖ್ಯ: ಎಚ್‌.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 15:13 IST
Last Updated 23 ಏಪ್ರಿಲ್ 2025, 15:13 IST
ಎಚ್‌.ಡಿ ದೇವೇಗೌಡ
ಎಚ್‌.ಡಿ ದೇವೇಗೌಡ    

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಭೀಕರ ದಾಳಿ ಮನಸ್ಸನ್ನು ನೋಯಿಸಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

‘ದಾಳಿಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲ ಕುಟುಂಬಗಳು ಮತ್ತು ಸ್ನೇಹಿತರ ನೋವಿನಲ್ಲಿ ಇಡೀ ದೇಶ ಜತೆಗೆ ನಿಲ್ಲಲಿದೆ. ಈ ದುರಂತ ಪ್ರಕರಣವನ್ನು ಉತ್ತಮ ಕಾರ್ಯತಂತ್ರ ರೂಪಿಸಿ, ಬುದ್ಧಿವಂತಿಕೆಯಿಂದ ನಿಭಾಯಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಜತೆ ಜೆಡಿಎಸ್‌ ಪಕ್ಷ ಇರುತ್ತದೆ. ಬಾಹ್ಯ ಶಕ್ತಿಗಳು ನಮ್ಮನ್ನು ಕೆರಳಿಸಿದಾಗ ಎಲ್ಲರೂ ಒಗ್ಗಟ್ಟು ಪ್ರದರ್ಶಿಸುವುದು ಮುಖ್ಯ’ ಎಂದಿದ್ದಾರೆ. 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT