ADVERTISEMENT

ಅರ್ಥ ಕಳೆದುಕೊಳ್ಳುತ್ತಿರುವ ವಿ.ವಿಗಳು: ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2022, 21:10 IST
Last Updated 6 ಆಗಸ್ಟ್ 2022, 21:10 IST
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ   

ಬೆಂಗಳೂರು: ಉನ್ನತ ಶಿಕ್ಷಣದ ಜ್ಞಾನಾರ್ಜನೆಯ ಕೇಂದ್ರಗಳಾದ ವಿಶ್ವವಿದ್ಯಾಲಯಗಳ ಸ್ವರೂಪ ಬದಲಾಗುತ್ತಿದ್ದು, ಅರ್ಥ ಕಳೆದುಕೊಳ್ಳುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗ, ದಿಶಾ ಭಾರತ ಸಹಯೋಗದಲ್ಲಿ ಹಮ್ಮಿ ಕೊಂಡಿದ್ದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಆರೂವರೆ ಕೋಟಿ ಜನಸಂಖ್ಯೆ ಇದ್ದರೂ, ಗುಣಮಟ್ಟದ ಶಿಕ್ಷಣ ದೊರಕುತ್ತಿಲ್ಲ. ಪ್ರತಿಭಾವಂತರ ಕೊರತೆ ಇದೆ. ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಬದ್ಧತೆ, ಪ್ರತಿಭೆಗೆ ಮನ್ನಣೆ ನೀಡದೆ, ಅಂಕಗಳ ಆಧಾರದಲ್ಲಿ ಪ್ರವೇಶ ನೀಡುತ್ತಿವೆ. ಇಂತಹ ಸನ್ನಿವೇಶದಲ್ಲಿ ತರಗತಿ ಕಲಿಕೆ ತೊರೆದು ಹೊರಬಂದರೆ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯ. ಅದಕ್ಕಾಗಿಯೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆ ತರಲಾಗುತ್ತಿದೆ ಎಂದರು.

ADVERTISEMENT

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತ್‌ಕುಮಾರ್, ‘ಮನೆಗಿಂತ ದೊಡ್ಡ ವಿಶ್ವವಿದ್ಯಾಲಯವಿಲ್ಲ. ಮನೆಯ ಸಂಸ್ಕೃತಿಯಿಂದ ಕಲಿಯದ ಪಾಠ ಬೇರೆ ಎಲ್ಲಿಯೂ ಕಲಿಯಲು ಸಾಧ್ಯವಿಲ್ಲ. ದಾನ, ಧರ್ಮದ ವಿಷಯ ಯಾವ ವಿವಿಯೂ ಕಲಿಸುವುದಿಲ್ಲ. ಹಳ್ಳಿಗಳಲ್ಲಿರುವ ರೈತರು ಬೆಳೆ ಬಂದಾಗ ಬಡವರಿಗೆ, ದರಿದ್ರರಿಗೆ ದಾನ ಮಾಡಿ ನಂತರ ಮನೆಗೆ ತೆಗೆದುಕೊಂಡು ಹೋಗುತ್ತಿದ್ದರು. ಇಂತಹ ಗುಣಗಳನ್ನು ಕಲಿಸಿದ್ದೇ ಭಾರತ ಎಂದು ಬಣ್ಣಿಸಿದರು.

ಬೆಂಗಳೂರು ವಿವಿ ಕುಲಪತಿ ಎಸ್.ಎಂ.ಜಯಕರ, ಕುಲಸಚಿವ ಎಂ. ಕೊಟ್ರೇಶ್, ದಿಶಾ ಭಾರತ್ ಅಧ್ಯಕ್ಷ ಎನ್.ವಿ.ರಘುರಾಮ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.